ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಸ್ಥಳದಲ್ಲೇ ಸಾವು

ಹನೂರು:ಏ:21: ತಮಿಳುನಾಡಿನ ಮೆಟ್ಟೂರಿನಿಂದ ಮಲೆ ಮಾದೇಶ್ವರ ಬೆಟ್ಟಕ್ಕೆತೆರಳುತ್ತಿದ್ದ ದ್ವಿಚಕ್ರವಾಹನ ಸವಾರನೊಬ್ಬ ಪಾಲರ್ ತಿರುವಿನಲ್ಲಿ ನಿಯಂತ್ರಣತಪ್ಪಿ ಕೆಳಗೆ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆಜರುಗಿದೆ.
ಮಲೆ ಮಾದೇಶ್ವರ ಬೆಟ್ಟದ ಸಾಲೂರು ಮಠದರಸ್ತೆಯಲ್ಲಿರುವ ಪುಟ್ಟಸ್ವಾಮಿರವರ ಮಗ ಮಹೇಶ್ ಎಂಬುವರೇ ಮೃತ ಪಟ್ಟ ವ್ಯಕ್ತಿಯಾಗಿದ್ದಾರೆ.
ಘಟನೆ ವಿವರ: ಕಾರ್ಯನಿಮಿತ್ತ ಮೆಟ್ಟೂರುಗ್ರಾಮಕ್ಕೆ ತೆರಳಿ ನಂತರ ಸ್ವಗ್ರಾಮಕ್ಕೆ ವಾಪಸ್ ತೆರಳುತ್ತಿದ್ದಾಗ ಪಾಲಾರ್ ಸಮೀಪದ ತಿರುವಿನಲ್ಲಿ ನಿಯಂತ್ರಣತಪ್ಪಿ ರಸ್ತೆಯಲ್ಲಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ, ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಕುಳಿತಿದ್ದ ಕುಮಾರಸ್ವಾಮಿ ಎಂಬವರಿಗೆ ತೀವ್ರ ಗಾಯಗೊಂಡಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಮಲೆ ಮಾದೇಶ್ವರ ಬೆಟ್ಟದ ಇನ್ಸ್ಪೆಕ್ಟರ್ ರಮೇಶ್ ಹಾಗೂ ಸಿಬ್ಬಂದಿ ವಿಶ್ವ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ಮಹೇಶ್ ಮಲೆ ಮಾದೇಶ್ವರ ಬೆಟ್ಟದರಸ್ತೆ ಬದಿಯಲ್ಲಿ ವ್ಯಾಪಾರ ನಡೆಸಿ ಜೀವನ ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ.
ಈ ಸಂಬಂಧ ಮಲೆಮಾದೇಶ್ವರ ಬೆಟ್ಟ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.