ದ್ವಿತೀಯ ಪಿಯುಸಿ ಪರೀಕ್ಷೆ: ಜಿಲ್ಲಾಡಳಿತದಿಂದ ಅಗತ್ಯ ಕ್ರಮ

ಧಾರವಾಡ, ಮಾ.7: ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 09 ರಿಂದ 29 ರವರೆಗೆ ಜರುಗಲಿದ್ದು, ಪರೀಕ್ಷೆಗಳು ಸುಗಮವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಜಿಲ್ಲಾಡಳಿತ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಕೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅವರು ತಿಳಿಸಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ಕುರಿತು ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸು ಮಾತನಾಡಿದರು.
ಧಾರವಾಡ ಜಿಲ್ಲೆಯಲ್ಲಿ ಒಟ್ಟು 46 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಧಾರವಾಡ ನಗರ-18, ಧಾರವಾಡ ಗ್ರಾಮೀಣ-2, ಹುಬ್ಬಳ್ಳಿ ಶಹರ-16, ಹುಬ್ಬಳ್ಳಿ ಗ್ರಾಮೀಣ-3, ನವಲಗುಂದ-3, ಕಲಘಟಗಿ-2, ಹಾಗೂ ಕುಂದಗೋಳ-2 ಹೀಗೆ ಒಟ್ಟು 46 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಈ ವರ್ಷ ಜಿಲ್ಲೆಯಲ್ಲಿ ಒಟ್ಟು 27,105 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆ ಜರುಗುವ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ ವ್ಯವಸ್ಥೆ ಮಾಡಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 100 ಮೀಟರ ಅಂತರದಲ್ಲಿನ ಎಲ್ಲ ಝರಾಕ್ಷ ಅಂಗಡಿಗಳನ್ನು ಬಂದ ಮಾಡಿ ಆದೇಶ ಹೊರಡಿಸಲಾಗಿದೆ. ಹಾಗೂ ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷೆ ಜರುಗುವ ಸಮಯದಲ್ಲಿ ನಿರಂತರವಾಗಿ ವಿದ್ಯುತ್ ಪೂರೈಸಲು ಕ್ರಮ ಜರುಗಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು 16 ಜನ ವೀಕ್ಷಕರನ್ನು ನೇಮಿಸಲಾಗಿದೆ. ಮತ್ತು ಜಿಲ್ಲೆಯಲ್ಲಿ ಪರೀಕ್ಷಾ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಮತ್ತು ಸಾಮೂಹಿಕ ನಕಲು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೃμÁ್ಣ ನಾಯ್ಕ, ಪರೀಕ್ಷೆ ನಡೆಯುವ ಕೇಂದ್ರಗಳ ಮುಖ್ಯಸ್ಥರುಗಳು, ಮಾರ್ಗಾಧಿಕಾರಿಗಳು, ಪೆÇಲೀಸ್ ಅಧಿಕಾರಿಗಳು, ಹೆಸ್ಕಾಂ ಅಧಿಕಾರಿಗಳು, ಅಂಚೆ ಇಲಾಖೆಯ ಅಧಿಕಾರಿಗಳು, ವೀಕ್ಷಕರು ಹಾಗೂ ಇತರರು ಉಪಸ್ಥಿತರಿದ್ದರು.