ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ಎಸ್ಎಸ್ಎಲ್ ಸಿ ಅಂಕ ಮಾನದಂಡ

ಬೆಂಗಳೂರು, ಜೂ.5-ದ್ವಿತೀಯ ಪಿಯುಸಿ ಫಲಿತಾಂಶ ನೀಡುವ ವೇಳೆ ಪ್ರಥಮ ಪಿಯುಸಿ ಅಂಕಗಳ ಜೊತೆಗೆ ಎಸ್​ಎಸ್​ಎಲ್​ಸಿ ಅಂಕಗಳನ್ನು ಗಣನೆಗೆ ತೆಗೆದುಕೊಳ್ಳುವುದಾಗಿ‌ ಪ್ರಾಥಮಿಕ‌ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಹೇಳಿದ್ದಾರೆ.
ಕೊರೊನಾ ಕಾರಣದಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಲಾಗಿದ್ದು ಗ್ರೇಡಿಂಗ್ ಆಧಾರದ ಮೇಲೆ ಫಲಿತಾಂಶ ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಫಲಿತಾಂಶ ಇನ್ನಷ್ಟು ‌ಸಮಗ್ರಗೊಳಿಸುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದರು.
ಈ ಎಲ್ಲ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಈ ತಿಂಗಳ ಅಂತ್ಯದೊಳಗೆ ಗ್ರೇಡಿಂಗ್ ಫಲಿತಾಂಶ ನೀಡಲಾಗುವುದು ಎಂದು ಅವರು ತಿಳಿಸಿದರು.
ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಕೇವಲ ಸಿಇಟಿ ಅಂಕವನ್ನು ಪರಿಗಣಿಸಿ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್ ಉನ್ನತ ಶಿಕ್ಷಣ ಸಚಿವ, ಡಿಸಿಎಂ ಅಶ್ವತ್ಥನಾರಾಯಣಗೆ ಮನವಿ ಮಾಡಿದ್ದಾರೆ.