ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿಅಲ್ಪಸಂಖ್ಯಾತರ ವಸತಿ ನಿಲಯದ ವಿದ್ಯಾರ್ಥಿಗಳ ಸಾಧನೆ

ಕಲಬುರಗಿ,ಏ.27:ಕಲಬುರಗಿ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯ ಮತ್ತು ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿನ ವಿದ್ಯಾರ್ಥಿಗಳು 2022-23ನೇ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯ ಮತ್ತು ವಸತಿ ಕಾಲೇಜುಗಳಲ್ಲಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳಲ್ಲಿ ಅತ್ಯುತ್ತಮ ಅಂಕಗಳಿಸಿ ಇಲಾಖೆಗೆ, ವಸತಿ ನಿಲಯ ಹಾಗೂ ಕಾಲೇಜಿಗೆ ಕೀರ್ತಿ ತಂದಿದ್ದು, ಈ ವಿದ್ಯಾರ್ಥಿಗಳ ಸಾಧನೆಗಾಗಿ ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಭಕ್ತಮಾರ್ಕಂಡೇಯ ಅವರು ಅಭಿನಂದನೆ ಸಲ್ಲಿಸಿದ್ದಾರೆ.

2022-23ನೇ ಸಾಲಿನಲ್ಲಿ ಜರುಗಿದ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಸಾವಳಗಿ(ಬಿ) ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿಗೆ ಶೇ 100 ರಷ್ಟು ಫಲಿತಾಂಶ ಹಾಗೂ ದಂಡೋತಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿಗೆ ಶೇ. 93 ರಷ್ಟು ಫಲಿತಾಂಶ ಬಂದಿರುತ್ತದೆ. 

ಸಾವಳಗಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಅನೀತಾ 565 (ಶೇ. 94.17), ಹಬೀಬಾ ಖಾತೂನ 557 (ಶೇ. 92.83) ಹಾಗೂ ಸನಾ ಅವರು 553 (ಶೇ. 92.17) ರಷ್ಟು ಅಂಕ ಪಡೆದಿದ್ದಾರೆ.

ದಂಡೋತಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಐಶ್ವರ್ಯ ವೆಂಕಟಪ್ಪ 526 (ಶೇ. 87.67), ತಹೆಮಿನಾ ಬೇಗಂ 516 (ಶೇ. 86) ಹಾಗೂ ಸಾದಿಯಾ ಸಾಹೇಬ ಪಟೇಲ ಅವರು 502 (ಶೇ. 83.67), ವಾಣಿಜ್ಯ ವಿಭಾಗದಲ್ಲಿ ದಿವ್ಯಾ ಆನಂದಪ್ಪ 520 (86.6), ಸುಮಯ್ಯಾ ಬಾನು 495 (ಶೇ. 82.5) ಹಾಗೂ ಅಂಕಿತಾ ಬಲಿರಾಮ ಅವರು 492 (ಶೇ. 82) ರಷ್ಟು ಅಂಕ ಪಡೆದಿದ್ದಾರೆ.

ಅಫಜಲಪುರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಕಲಾ ವಿಭಾಗದ ವಿದ್ಯಾರ್ಥಿನಿ ಗಂಗುಬಾಯಿ 580 (96.67), ಚಿತ್ತಾಪುರ (ಹಳೆಯ) ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ಕಲಾ ವಿಭಾಗದ ವಿದ್ಯಾರ್ಥಿ ಹುಸೇನ ಬಾಷಾ 570 (ಶೇ. 95), ಕಲಬುರಗಿ ರಿಂಗ್ ರೋಡ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ಕಲಾ ವಿಭಾಗದ ವಿದ್ಯಾರ್ಥಿ ಮಹಮ್ಮದ್ ಯೂನುಸ್ 568 (ಶೇ. 94.67), ಜೇವರ್ಗಿ (ನ್ಯೂ) ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ವಿಜ್ಞಾನ ವಿಭಾಗದ ವಿದ್ಯಾರ್ಥಿ ಮಹಿಬೂಬ 567 (ಶೇ. 94.50) ರಷ್ಟು ಅಂಕ ಪಡೆದಿದ್ದಾರೆ.

ಚಿತ್ತಾಪುರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶೇಭಾ ಅನವಾರಿ 553 (ಶೇ. 92.17), (ನ್ಯೂ) ಆಳಂದ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸಿದ್ದರಾಮ 536 (ಶೇ. 89.33), (ಅಪ್‍ಗ್ರೇಡ್) ಆಳಂದ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ವಾಣಿಜ್ಯ ವಿಭಾಗದ ವಿದ್ಯಾರ್ಥಿ ರಾಕೇಶ 564 (ಶೇ. 94), ಜೇವರ್ಗಿ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಮುಸ್ಕಾನ 506 (ಶೇ. 84.33) ಹಾಗೂ ಶಹಾಬಾದ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸಿದ್ದಣ್ಣಾ ಅವರು 502 (ಶೇ. 83.67) ರಷ್ಟು ಅಂಕ ಪಡೆದಿದ್ದಾರೆ.

 ಆಯಾ ವಿಷಯಗಳಲ್ಲಿ ಶೇ. 100ಕ್ಕೆ ನೂರರಷ್ಟು ಅಂಕ ಪಡೆದ ವಿದ್ಯಾರ್ಥಿಗಳ ವಿವರ ಇಂತಿದೆ. ಸಾಳವಗಿ ಮೊರಾರ್ಜಿ ದೇಸಾಯಿ ವಸತಿ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಾನಿಯಾ ಅವರು ಕನ್ನಡ ವಿಷಯದಲ್ಲಿ 100ಕ್ಕೆ ನೂರರಷ್ಟು ಅಂಕ ಪಡೆಯುವುದರ ಜೊತೆಗೆ 550 (ಶೇ. 91.67) ರಷ್ಟು ಅಂಕ ಹಾಗೂ ಅಫಜಲಪುರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಕಲಾ ವಿಭಾಗದ ವಿದ್ಯಾರ್ಥಿನಿ ಗಂಗುಬಾಯಿ ಅವರು ಕನ್ನಡ ಮತ್ತು ಸಮಾಜಶಾಸ್ತ್ರ ವಿಷಯಗಳಲ್ಲಿ 100ಕ್ಕೆ ನೂರರಷ್ಟು ಅಂಕ ಪಡೆಯುವುದರ ಜೊತೆಗೆ 580 (96.67) ರಷ್ಟ ಅಂಕ ಪಡೆದಿದ್ದಾರೆ. 
ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವಿದ್ಯಾರ್ಥಿ ನಿಲಯಗಳ ಮತ್ತು ವಸತಿಕಾಲೇಜಿನಲ್ಲಿ ಪ್ರವೇಶ ಪಡೆದು ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಹಾಗೂ ಎಲ್ಲಾ ಭೋಧಕ, ಭೋಧಕೇತರ ಸಿಬ್ಬಂದಿಗಳಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಅಭಿನಂದನೆ ಸಲ್ಲಿಸಿದೆ.