ದ್ವಿತೀಯ ಪಿಯು ಕನ್ನಡ ಪರೀಕ್ಷೆ: 753 ವಿದ್ಯಾರ್ಥಿಗಳು ಗೈರು

ಚಿತ್ರದುರ್ಗ.ಮಾ.೧೦;  ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕನ್ನಡ ವಿಷಯದ ಪರೀಕ್ಷೆಗೆ 753 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಕನ್ನಡ ವಿಷಯದಲ್ಲಿ 13,368 ವಿದ್ಯಾರ್ಥಿಗಳು ನೊಂದಣಿಯಾಗಿದ್ದು, 12,615 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, 753 ವಿದ್ಯಾರ್ಥಿಗಳು ಗೈರಾಗಿದ್ದಾರೆ.
  ಚಿತ್ರದುರ್ಗದ ಜಿಲ್ಲೆಯಲ್ಲಿ 23 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಯಾವುದೇ ಡಿಬಾರ್ ಪ್ರಕರಣ ವರದಿಯಾಗಿಲ್ಲ. ಮಾರ್ಚ್ 10ರಂದು ಯಾವುದೇ ಪರೀಕ್ಷೆ ಇರುವುದಿಲ್ಲ. ಮಾರ್ಚ್ 11ರಂದು ಗಣಿತಶಾಸ್ತ್ರ ಮತ್ತು ಶಿಕ್ಷಣಶಾಸ್ತ್ರ ವಿಷಯದ ಪರೀಕ್ಷೆ ನಡಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ರಾಜು ತಿಳಿಸಿದ್ದಾರೆ.