ದ್ವಿತೀಯ ಪಿಯು ಪರೀಕ್ಷೆ : ಗಿರೀಶ ಹೆಳವರ ಕಾಲೇಜಿಗೆ ಪ್ರಥಮ

ವಿಜಯಪುರ,ಏ,.12 : ಇಲ್ಲಿನ ಪುಲಕೇಶಿ ನಗರದ ಶ್ರೀ ಜಗಜ್ಯೋತಿ ಬಸವೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿ ಗಿರೀಶ ಹೆಳವರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 93 ರಷ್ಟು ಅಂಕ ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾ£ದಲ್ಲಿ ತೇರ್ಗಡೆಯಾಗಿದ್ದಾನೆ.
ಗಿರೀಶ ಹೆಳವರ ಪರೀಕ್ಷೆಯಲ್ಲಿ 600 ಕ್ಕೆ 558 ಅಂಕಗಳನ್ನು ಪಡೆದು ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾನೆ.
ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಪ್ರತಿಭಾನ್ವಿತ ಈ ವಿದ್ಯಾರ್ಥಿಗೆ ಕಾಲೇಜಿನ ಪ್ರಾಚಾರ್ಯರು, ಎಲ್ಲ ಉಪನ್ಯಾಸಕರು ಹಾಗೂ ಆಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿದ್ದಾರೆ.
ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲೂ ಈ ವಿದ್ಯಾರ್ಥಿ ಶೇ. 92 ರಷ್ಟು ಅಂಕ ಗಳಿಸಿ ಇಬ್ರಾಂಹಿಪುರದ ಚಂದ್ರಕಾಂತ ನೀಲಪ್ಪ ಸಜ್ಜನ ಪ್ರೌಢ ಶಾಲೆಗೆ ಪ್ರಥಮ ಸ್ಥಾನ ಬಂದಿದ್ದನ್ನು ಇಲ್ಲಿ ಸ್ಮರಿಸಬಹುದು.