ದ್ವಿತೀಯ ಪಿಯು ಪೂರಕ ಪರೀಕ್ಷೆಗಳು ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ


ಸಂಜೆವಾಣಿ ವಾರ್ತೆ
ಬಳ್ಳಾರಿ,ಮೇ 22: ಜಿಲ್ಲೆಯಲ್ಲಿ ಮೇ 23 ರಿಂದ ಜೂನ್ 03 ರವರೆಗೆ ಒಟ್ಟು 06 ಕೇಂದ್ರಗಳಲ್ಲಿ ದ್ವಿತೀಯ ಪಿಯು ಪೂರಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಆದೇಶಿಸಿದ್ದಾರೆ.
ಜಿಲ್ಲೆಯಲ್ಲಿ ಬಳ್ಳಾರಿ-04, ಸಿರುಗುಪ್ಪ-01, ಸಂಡೂರು-01 ಸೇರಿ ಒಟ್ಟು 06 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯು ಪೂರಕ ಪರೀಕ್ಷೆಗಳು ನಡೆಯಲಿದ್ದು, ಬೆಳಗ್ಗೆ 10.15 ರಿಂದ ಮಧ್ಯಾಹ್ನ 01.30 ರವರೆಗೆ ಹಾಗೂ ಮಧ್ಯಾಹ್ನ 02.15 ರಿಂದ ಸಂಜೆ 05.30 ರವರೆಗೆ ನಡೆಯಲಿವೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಒಳಗಿನ ಆವರಣವನ್ನು ನಿಬರ್ಂಧಿತ ಪ್ರದೇಶವೆಂದು ಘೋಷಿಸಿದ್ದಾರೆ.
ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ನಿಷೇಧಿಸಿದೆ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತಲಿನ ಝೆರಾಕ್ಸ್ ಅಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಆದೇಶದಲ್ಲಿ ತಿಳಿಸಿದೆ.

One attachment • Scanned by Gmail

ReplyForward