ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ:ಪ್ರವೇಶ ಪತ್ರ ತೋರಿಸಿ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ

ಕಲಬುರಗಿ,ಮಾ.07:ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಗಳು ಇದೇ ಮಾರ್ಚ್ 9 ರಿಂದ 29 ರವರೆಗೆ ಜರುಗಲಿದೆ.

ಪರೀಕ್ಷೆಗೆ ಹಾಜರಾಗುವ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಮತ್ತು ಹಿಂದಿರುಗುವಾಗ “ದ್ವಿತೀಯ ಪಿ.ಯು.ಸಿ. ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸಲು ನಿಗಮದ ಎಲ್ಲಾ ಚಾಲಕ/ ನಿರ್ವಾಹಕರುಗಳಿಗೆ ತಿಳಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.