ದ್ವಿದಳ ಧಾನ್ಯ, ಎಣ್ಣೆಕಾಳು ಬಿತ್ತನೆ ಬೀಜ ಕಿರುಚೀಲಗಳ ವಿತರಣೆ

ಚಿತ್ರದುರ್ಗ,ಜೂ.9; ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ ಯೋಜನೆಯಡಿ ದ್ವಿದಳ ಧಾನ ಮತ್ತು ಎಣ್ಣೆಕಾಳು ಬಿತ್ತನೆ ಬೀಜ ಕಿರುಚೀಲಗಳ ವಿತರಣೆಗೆ  ಕೃಷಿ ಸಚಿವರಾದ ಬಿ.ಸಿ.ಪಾಟೀಲ ಚಾಲನೆ ನೀಡಿದರು.
 ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಕೃಷಿ ಇಲಾಖೆ ವತಿಯಿಂದ ದ್ವಿದಳ ಧಾನ್ಯ ಮತ್ತು ಎಣ್ಣೆಕಾಳು ಬಿತ್ತನೆ ಬೀಜ ಕಿರುಚೀಲಗಳನ್ನು ರೈತರಿಗೆ ವಿತರಿಸಲಾಯಿತು.
 ಇದೇ ಸಂದರ್ಭದಲ್ಲಿ ಕೃಷಿ ಅಭಿಯಾನ ವಾಹನಕ್ಕೂ ಹಸಿರು ನಿಶಾನೆ ತೋರಿಸುವ ಮೂಲಕ ಕೃಷಿ ಸಚಿವರಾದ ಬಿ.ಸಿ.ಪಾಟೀಲ ಚಾಲನೆ ನೀಡಿದರು.
 ಕಾರ್ಯಕ್ರಮದಲ್ಲಿ ಸಂಸದರಾದ ಎ.ನಾರಾಯಣಸ್ವಾಮಿ, ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಟಿ.ರಘುಮೂರ್ತಿ, ಪೂರ್ಣಿಮಾ ಶ್ರೀನಿವಾಸ್, ವಿಧಾನಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಚಿದಾನಂದ ಎಂ ಗೌಡ, ಅಪರ ಕೃಷಿ ನಿರ್ದೇಶಕರಾದ ದಿವಾಕರ್ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ; ಕೆ.ನಂದಿನಿದೇವಿ, ಜಂಟಿ ಕೃಷಿ ನಿರ್ದೇಶಕ ರಮೇಶ್‍ಕುಮಾರ್ ಸೇರಿದಂತೆ ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.
ಫೋಟೋ ವಿವರ: ಚಿತ್ರದುರ್ಗ ಜಿಲ್ಲಾ ಪಂಚಾಯಿತಿ  ಆವರಣದಲ್ಲಿ ಮಂಗಳವಾರ ದ್ವಿದಳ ಧಾನ್ಯ ಮತ್ತು ಎಣ್ಣೆಕಾಳು ಬಿತ್ತನೆ ಬೀಜ ಕಿರುಚೀಲಗಳನ್ನು ಕೃಷಿ ಸಚಿವರಾದ ಬಿ.ಸಿ.ಪಾಟೀಲ ವಿತರಿಸಿದರು.