ದ್ವಿಪಕ್ಷೀಯ ಸಂಬಂಧ ಮೋದಿ- ಇಬ್ರಾಹಿಂ ಚರ್ಚೆ

ನವದೆಹಲಿ,ಆ.೨- ಭಾರತ ಪ್ರವಾಸದಲ್ಲಿರುವ ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಸೋಲಿಹ್ ಅವರು ಉಭಯ ದೇಶಗಳ ಸಂಬಂಧಗಳ ಬಲಪಡಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.
ಇಬ್ರಾಹಿಂ ಸೋಲಿಹ್ ಅವರು ನಾಲ್ಕು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ಮಾಲ್ಡೀವ್ಸ್ ನಲ್ಲಿ ನೆಲೆಗೊಂಡಿರುವ ಭಾರತೀಯರ ಬೆಳವಣಿಗೆ ಸೇರಿದಂತೆ ಹಲವು ಮಹತ್ವದ ವಿಷಯಗಳು ಹಾಗು ಬಾಂಧವ್ಯ ಬಲವರ್ಧನೆ ಕುರಿತು ಚರ್ಚೆಯಾಗುವ ನಿರೀಕ್ಷೆಯಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.
ನಮ್ಮ ನೆರೆ ಹೊರೆಯ ಸುರಕ್ಷತೆ ಮತ್ತು ಭದ್ರತೆ ಗೆ ಹೆಚ್ಚಿನ ಒತ್ತು ನೀಡಲಾಗುವುದು ಮಾಲ್ಡೀವ್ಸ್‌ನ -_ಭಾರತದ ನೀತಿಗಳು ಇದಕ್ಕೆ ಪೂರಕವಾಗಿವೆ. ಇದು ವಿಶೇಷ ಪಾಲುದಾರಿಕೆಯನ್ನು ಮುಂದಕ್ಕೆ ಕೊಂಡೊಯ್ಯುತ್ತವೆ” ಎಂದು ಜೈಶಂಕರ್ ಟ್ವೀಟ್ ಮಾಡಿದ್ದಾರೆ.
“ಇತ್ತೀಚಿನ ವರ್ಷಗಳಲ್ಲಿ, ಪಾಲುದಾರಿಕೆ ಸಹಕಾರದ ಎಲ್ಲಾ ಕ್ಷೇತ್ರಗಳಲ್ಲಿ ಕ್ಷಿಪ್ರ ಬೆಳವಣಿಗೆ ಕಂಡಿದೆ. ಮಾಲ್ಡೀವ್ಸ್ ಅಧ್ಯಕ್ಷರ ಅಧಿಕೃತ ಭೇಟಿ ಉಭಯ ದೇಶಗಳಲ್ಲಿ ವಿಶಾಲ ವ್ಯಾಪ್ತಿಯ ಪಾಲುದಾರಿಕೆಯಲ್ಲಿ ಮಾಡಿದ ಪ್ರಗತಿಯನ್ನು ಪರಿಶೀಲಿಸಲು ಮತ್ತು ಅದಕ್ಕೆ ಮತ್ತಷ್ಟು ವೇಗ ನೀಡಲು ಅವಕಾಶ ಒದಗಿಸುತ್ತದೆ ಎಂದು ಅವರು ಹೇಳಿದ್ದಾರೆ.
ರಕ್ಷಣಾ ಮತ್ತು ಭದ್ರತಾ ಸಹಕಾರವನ್ನು ಮತ್ತಷ್ಟು ಹೆಚ್ಚಿಸುವ ಮಾರ್ಗಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಇಬ್ರಾಹಿಂದ ಸೋಲಿಹ್ ಚರ್ಚಿಸುವ ನಿರೀಕ್ಷೆಯಿದೆ