ದ.ಆಫ್ರಿಕಾ ವಿರುದ್ದದ ಒಡಿಐ ಸರಣಿ‌‌ಗೆ ಭಾರತ ತಂಡ ಪ್ರಕಟ, ಪ್ರಸಿದ್ದ್ ಗೆ ಸ್ಥಾನ

ಮುಂಬೈ, ಜ.12- ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಇಂದು ಭಾರತ ತಂಡವನ್ನು ಪ್ರಕಟಿಸಲಾಗಿದೆ. ಕರ್ನಾಟಕದ ಪ್ರಸಿದ್ಧ್ ಕೃಷ್ಣ ತಂಡದಲ್ಲಿ‌ ಸ್ಥಾನ ಕಲ್ಪಿಸಲಾಗಿದೆ.
ಕೊರೊನಾ ಸೋಂಕಿಗೆ ತುತ್ತಾಗಿರುವ ವಾಷಿಂಗ್ಟನ್ ಸುಂದರ್ ಅವರನ್ನು ಕೈಬಿಡಲಾಗಿದೆ. ಜಯಂತ್ ಯಾದವ್ ಹಾಗೂ ಮಧ್ಯಮ ವೇಗದ ಬೌಲರ್ ನವ್ ದೀಪ್ ಸೈನಿಗೆ ಅವಕಾಶ ನೀಡಲಾಗಿದೆ.


ಗಾಯಾಳುವಾಗಿರುವ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕರ್ನಾಟಕದ ಕೆ.ಎಲ್.ರಾಹುಲ್ ತಂಡದ ಸಾರಥ್ಯ ವಹಿಸಲಿದ್ದಾರೆ. ಅಲ್ಲದೆ ಏಕದಿನ ತಂಡದ ನಾಯಕತ್ವದಿಂದ ಕೆಳಗಿಳಿದ ಬಳಿಕ ವಿರಾಟ್ ಕೊಹ್ಲಿ ಆಟಗಾರನಾಗಿ ಕಣಕ್ಕಿಳಿಯುತ್ತಿದ್ದಾರೆ.
ಐಪಿಎಲ್ ನಲ್ಲಿ ಮಿಂಚಿರುವ ಋತುರಾಜ್ ಗಾಯಕ್ವಾಡ್, ವೆಂಕಟೇಶ್ ಅಯ್ಯರ್ ತಂಡದಲ್ಲಿ ಸ್ಥಾನ ಪಡೆಯಲು ಯಶಸ್ವಿಯಾಗಿದ್ದಾರೆ.
ಆಯ್ಕೆ ಸಮಿತಿಯ ಮುಖ್ಯಸ್ಥ ರಾಗಿರುವ ಚೇತನ್ ಶರ್ಮಾ ನೇತೃತ್ವದ ಐವರು ಸದಸ್ಯರ ಆಯ್ಕೆ ಸಮಿತಿ 18 ಮಂದಿ ಆಟಗಾರರನ್ನು ಆಯ್ಕೆಮಾಡಿದೆ.

ತಂಡ ಇಂತಿದೆ:

ಕೆ.ಎಲ್. ರಾಹುಲ್ (ನಾಯಕ), ಜಸ್‌ಪ್ರೀತ್ ಬೂಮ್ರಾ (ಉಪನಾಯಕ), ಶಿಖರ್ ಧವನ್, ಋತುರಾಜ್ ಗಾಯಕವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಭ್ ಪಂತ್, ಇಶಾನ್ ಕಿಶನ್ (ವಿಕೆಟ್‌ಕೀಪರ್), ಯಜುವೇಂದ್ರ ಚಾಹಲ್, ಆರ್. ಅಶ್ವಿನ್, ಭುವನೇಶ್ವರ್ ಕುಮಾರ್, ದೀಪಕ್ ಚಾಹರ್, ಪ್ರಸಿದ್ಧ ಕೃಷ್ಣ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಜಯಂತ್ ಯಾದವ್, ನವದೀಪ್ ಸೈನಿ.