ದ.ಕ. ಜಿಲ್ಲೆಯಲ್ಲಿ ನಿನ್ನೆ ೩೦ ಮಂದಿಗೆ ಸೋಂಕು: ೯೧ ಮಂದಿ ಡಿಸ್ಚಾರ್ಜ್

ಮಂಗಳೂರು, ನ.೧೮- ದ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದು, ನಿನ್ನೆ ೩೦ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ನಡುವೆ ನಿನ್ನೆ ೯೧ ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು ಗುಣಮುಖರಾದವರ ಸಂಖ್ಯೆ ಉತ್ತಮವಾಗಿದ್ದು, ೨೯೯೬೨ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ ೬೮೧ ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಇಬ್ಬರು ಸೋಂಕಿಗೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಕೊರೋನಾ ಸಾವಿನ ಸಂಖ್ಯೆ ೬೯೬ಕ್ಕೆ ಏರಿಕೆಯಾಗಿದೆ.

ಇನ್ನು ದ.ಕ. ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು ೩೦೪೧೭೩ ಮಂದಿ ಪರೀಕ್ಷೆಗೊಳಪಟ್ಟಿದ್ದಾರೆ. ಈ ಪೈಕಿ ೨೭೨೮೩೪ ಮಂದಿಯ ವರದಿ ನೆಗೆಟಿವ್ ಆಗಿದ್ದು, ಜಿಲ್ಲೆಯಲ್ಲಿ ಇಲ್ಲಿಯ ತನಕ ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ ೩೧೩೩೯ಕ್ಕೆ ತಲುಪಿದೆ.