ದ.ಕ. ಜಿಲ್ಲೆಯಲ್ಲಿ ನಿನ್ನೆ ೮ ಹೊಸ ಪ್ರಕರಣಗಳು ಪತ್ತೆ

ಮಂಗಳೂರು, ಡಿ೨೯- ದಕ್ಷಿಣ ಕನ್ನಡ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ನಿನ್ನೆ ಎಂಟು ಹೊಸ ಕರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಈ ಸಂಖ್ಯೆ ೩೨,೭೮೩ಕ್ಕೆ ಏರಿಕೆಯಾಗಿದೆ. ಈ ಪೈಕಿ ೩೭೨ ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಒಟ್ಟು ೪,೫೨,೮೬೫ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ ೪,೨೦,೦೮೨ ನಕಾರಾತ್ಮಕವಾಗಿದೆ.

ಒಟ್ಟು ೩೭ ಜನರನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ ೩೧,೬೭೯ಕ್ಕೆ ಏರಿಕೆಯಾಗಿದೆ. ಈವರೆಗೆ ಒಟ್ಟು ೭೩೨ ಸಾವುಗಳು ಸಂಭವಿಸಿವೆ.