ದ.ಕ. ಸಂಘದಿಂದ ಮಕರ ಸಂಕ್ರಾಂತಿ

ಕಲಬುರಗಿ:ಜ.13: ದಕ್ಷಿಣ ಕನ್ನಡ ಸಂಘದ ಆಶ್ರಯದಲ್ಲಿ ಜನವರಿ 14 ರಂದು ಇಂದು ಮಕರ ಸಂಕ್ರಾಂತಿ ಹಬ್ಬವನ್ನು ಕಲಬುರ್ಗಿಯ ಶ್ರೀರಾಮ ಮಂದಿರದಲ್ಲಿ ಆಚರಿಸಲಾಗುವುದು ಎಂದು ಕಾರ್ಯದರ್ಶಿ ರಾಮಕೃಷ್ಣ ಕೆದಿಲಾಯ ತಿಳಿಸಿದರು.

        ಸಭಾ ಕಾರ್ಯಕ್ರಮವು ಸಾಯಂಕಾಲ 6.30 ನಿಮಿಷಕ್ಕೆ ನಡೆಯಲಿದ್ದು ಇದರಲ್ಲಿ ಕರ್ನಾಟಕ ಕಲ್ಯಾಣ ಕರ್ನಾಟಕ ಬಿಜೆಪಿಯ ಸಂಘಟನಾ ಕಾರ್ಯದರ್ಶಿಗಳಾದ ಶ್ರೀಯುತ ಅರುಣ್ ಬಿನ್ನಾಡಿ ಅವರು ಎಳ್ಳು ಬೆಲ್ಲ ಹಂಚುವ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮ ಅಭಿವೃದ್ಧಿ ಯೋಜನೆ ವಿಭಾಗ ಮುಖ್ಯಸ್ಥರಾದ ಜಯಂತ್ ಪೂಜಾರಿ ಅವರು ವಹಿಸಲಿದ್ದಾರೆ .ಸಂಘದ ಅಧ್ಯಕ್ಷರಾದ ಡಾ. ಸದಾನಂದ ಪೆರ್ಲ ಉಪಸ್ಥಿತರಿರುವರು.ಈ ಕಾರ್ಯಕ್ರಮದಲ್ಲಿ ಸಂಘದ ಸದಸ್ಯರೆಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕಾರ್ಯದರ್ಶಿ ರಾಮಕೃಷ್ಣ ಕೆದಿಲಾಯ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ