`ದ ಜಡ್ಜ್ ಮೆಂಟ್’ ಚಿತ್ರೀಕರಣ ಮುಕ್ತಾಯ   

ಕ್ರೇಜಿಸ್ಟಾರ್ ರವಿಚಂದ್ರನ್, ಮೇಘನಾ ಗಾಂವಕರ್ ಸೇರಿದಂತೆ ಮತ್ತಿತರರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ “ದ ಜಡ್ಜ್ ಮೆಂಟ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.

ಚಿತ್ರದಲ್ಲಿ ನಟಿ ಧನ್ಯ ರಾಮ್‍ಕುಮಾರ್, ದಿಗಂತ್ ,ಧನ್ಯ ರಾಮಕುಮಾರ್,ಲಕ್ಷ್ಮೀ ಗೋಪಾಲಸ್ವಾಮಿ, ನಾಗಾಭರಣ, ಪ್ರಕಾಶ್ ಬೆಳವಾಡಿ, ರಂಗಾಯಣ ರಘು, ರವಿಶಂಕರ್ ಗೌಡ, ಸುಜಯ್ ಶಾಸ್ತ್ರಿ ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಿಗಿ, ನವಿಲ ಸೇರಿದಂತೆ ಹಲವು ಕಲಾವಿದರ ದಂಡು ಚಿತ್ರದಲ್ಲಿದೆ.

ನಿರ್ದೇಶಕ ಗುರುರಾಜ ಕುಲಕರ್ಣಿ ಮಾತನಾಡಿ ಚಿತ್ರೀಕರಣ ಪೂರ್ಣವಾಗಿದೆ. ಕಾಕತಾಳೀಯ ಎಂದರೆ ಚಿತ್ರದ ಚಿತ್ರೀಕರಣ ಕಳೆದವರ್ಷ ಡಾ.ರಾಜಕುಮಾರ್ ಹುಟ್ಟುಹಬ್ಬದಂದು ಆರಂಭವಾಗಿತ್ತು. ಈ ವರ್ಷ ಅವರ ಹುಟ್ಟುಹಬ್ಬದ ದಿನ ಮುಕ್ತಾಯವಾಗಿದೆ. ಚಿತ ಸರಾಗವಾಗಿ ಮುಕ್ತಾಯವಾಗಲು ರವಿಚಂದ್ರನ್ ಸೇರಿದಂತೆ ಎಲ್ಲಾ ಕಲಾವಿದರ ಹಾಗೂ ತಂತ್ರಜ್ಞರ  ಸಹಕಾರವೇ ಕಾರಣ ಎಂದರು.

ಕೋರ್ಟ್ ರೂಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ “ದ ಜಡ್ಜ್ ಮೆಂಟ್” ಚಿತ್ರವನ್ನು ಮೇ ನಲ್ಲಿ ತೆರೆಗೆ ತರುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು

ನಟಿ ಮೇಘನಾ ಗಾಂವ್ಕರ್ ಮಾತನಾಡಿ ರವಿಚಂದ್ರನ್ ಅವರ ಜೊತೆ ನಟಿಸಿದ್ದು ಸಂತೋಷವಾಗಿದೆ. ಡಾ. ರಾಜಕುಮಾರ್ ಹುಟ್ಟುಹಬ್ಬದ ದಿನ ಆರಂಭವಾಗಿ, ಈ ವರ್ಷದ ಅವರ ಹುಟ್ಟುಹಬ್ಬದ ದಿನವೇ ಚಿತ್ರೀಕರಣ ಮುಕ್ತಾಯವಾಗಿರುವುದು ನಿಜಕ್ಕೂ ಅಚ್ಚರಿಯಾಗಿದೆ. ಅಣ್ಣಾವ್ರ ಆಶೀರ್ವಾದ ನಮ್ಮ ತಂಡಕ್ಕೆ ಇದೆ ಎಂದರು.

ನಟಿ ಧನ್ಯ ರಾಮ್ ಕುಮಾರ್, “ದ ಜಡ್ಜ್ ಮೆಂಟ್” ಚಿತ್ರದಲ್ಲಿ ನಟಿಸಿರುವುದಕ್ಕೆ ಖುಷಿಯಾಗಿದೆ. ಕಲಾವಿದರನ್ನು ನೋಡಿಕೊಂಡ ರೀತಿ ನಿಜಕ್ಕೂ ಶ್ಲಾಘನೀಯ ಎಂದು ತಿಳಿಸಿದರು.

ಪೂರ್ಣಿಮಾ ರಾಮಕುಮಾರ್ ಗೀತರಚನೆಕಾರ  ಪ್ರಮೋದ್ ಮರವಂತೆ ಹಾಗು ಚಿತ್ರದಲ್ಲಿ ನಟಿಸಿರುವ ರೇಖಾ ಕೂಡ್ಲಗಿ, ನವಿಲ ಚಿತ್ರದ ಕುರಿತು ಮಾತನಾಡಿದರು. ಛಾಯಾಗ್ರಾಹಕ ಪಿ.ಕೆ.ಹೆಚ್ ದಾಸ್ ಹಾಗೂ ಸಂಕಲನಕಾರ ಕೆಂಪರಾಜ್ ಸೇರಿದಂತೆ ಅನೇಕ ತಂತ್ರಜ್ಞರು ಪತ್ರಿಕಾಗೋಷ್ಠಿಯಲ್ಲಿದ್ದರು. ನಿರ್ಮಾಪಕರಾದ ಶರದ್ ನಾಡಗೌಡ ಹಾಗೂ ರಾಮು ರಾಯಚೂರು. ನಿರ್ಮಾಪಕರಾದ ವಿಶ್ವನಾಥ್ ಗುಪ್ತ ಹಾಗು ರಾಜಶೇಖರ ಪಾಟೀಲ್ ಉಪಸ್ಥಿತರಿದ್ದರು.