`ದ ರೂಲರ್ಸ್’ ಅಭೂತಪೂರ್ವ ಪ್ರತಿಕ್ರಿಯೆ

ಸ್ಯಾಂಡಲ್‍ವುಡ್ ಅಂಗಳದಲ್ಲಿ ಸದ್ದಿಲ್ಲದೇ ಸಿದ್ದವಾಗಿರುವ “ದ ರೂಲರ್ಸ್” ಚಿತ್ರದ ಟೀಸರ್ ಮಿಲಿಯನ್‍ಗೂ ಅಧಿಕ ವೀಕ್ಷಣೆ ಪಡೆದು ಮುನ್ನುಗಿದ್ದು ರಾಜ್ಯದಾದ್ಯಂತ ಸಿನಿಪ್ರಿಯರಿಂದ ಪ್ರಶಂಸೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನೈಜ ಘಟನೆಗಳನ್ನಾಧರಿಸಿ ಮಾಡಿರುವ ಚಿತ್ರ ಇದು. ಕೋಲಾರ ಜಿಲ್ಲೆಯಲ್ಲಿ ನಡೆದಿರೋ,ನಡೆಯುತ್ತಿರೋ ಘಟನಾವಳಿಗಳನ್ನಾಧರಿಸಿ ಚಿತ್ರ ಮಾಡಲಾಗಿದೆ.  ಸಂವಿಧಾನವೊಂದು ಆಸರೆ ಮತ್ತು ಶಕ್ತಿ ಎಂಥಹದ್ದು, ಅದು ಭಾರತೀಯ ಪ್ರಜ್ಞೆಗೆ ಕೊಟ್ಟಿರೋ ಶಕ್ತಿ ಎಂಥಹದ್ದು ಅನ್ನೋ ವಿಚಾರವನ್ನ ಮೂಲವಾಗಿಸಿಕೊಂಡು ದ ರೂಲರ್ಸ್ ಚಿತ್ರ ಮಾಡಲಾಗಿದೆ.

ಮೇಲೂ ಕೀಳು ಅನ್ನೋ ಸಮುದಾಯಗಳ ಸಂಘರ್ಷ ಮರೆಯಾದ ಮಾನವೀಯತೆ ಜೊತೆಗೆ ಸಂವಿಧಾನ ಕೊಟ್ಟಿರೋ ಸಮಾನತೆಯ ಹಕ್ಕನ್ನ ಪ್ರತಿಪಾದಿಸುವ ವಿಷಯಗಳನ್ನು ಚಿತ್ರ ಒಳಗೊಂಡಿದೆ.

ದ ರೂರಲ್ಸ್  ಹೆಸರೇ ಸೂಚಿಸುವಂತೆ ದ ಅಂದ್ರೆ ದಲಿತ ಇದಕ್ಕೆ ರೂಲಸ್ರ್ಸ್ ಅಂತ ಹೆಸರಿಟ್ಟಿದೆ. ಈ 5ಜಿ ಜಮಾನದಲ್ಲೂ ಇನ್ನೂ ಜಾತಿ ಪಿಡುಗು ಎಷ್ಟರ ಮಟ್ಟಿಗೆ ಶೀತಲವಾಗಿ ಸಮಾದೊಳಗಿದೆ. ಮತ್ತು ಅದರ ಪರಿಣಾಯ ಏನಾಗ್ತಿದೆ ಅನ್ನೋದನ್ನ ಈ ಚಿತ್ರದಲ್ಲಿ ಹೇಳಲಾಗಿದೆಯಂತೆ. 

ಕೋಲಾರದ ಡಾ. ಕೆ.ಎಮ್ ಸಂದೇಶ್ ನಾಯಕನಾಗಿದ್ದಾರೆ.ಅಶ್ವಥ್ ಬಳಗೆರೆ ನಿರ್ಮಾಣದಲ್ಲಿ, ಉದಯ್ ಭಾಸ್ಕರ್ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಕರುಣ್ ಕೆ.ಜಿ.ಎಫ್ ಸಂಗೀತವಿದೆ. ಚಿತ್ರದಲ್ಲಿ ನವ ಪ್ರತಿಭೆ ವಿಶಾಲ್, ರಿತಿಕಾ ಗೌಡ, ಕೆ.ಜಿ.ಎಫ್ ನ ಪಠಾಣ್ ಖ್ಯಾತಿಯ ಪುನೀತ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು, ಖುದ್ದು ಸಂದೇಶ್ ತಮ್ಮ ನೈಜ ಪಾತ್ರವನ್ನ ತಾವೇ ಮಾಡಿದ್ದು ಸದ್ಯದಲ್ಲಿಯೇ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ.