ಧರ್ಮಸಿಂಗ್ ಫೌಂಡೇಶನ್ ನಿಂದ ಜಿಲ್ಲಾಧಿಕಾರಿಗಳಿಗೆ ಆಕ್ಸಿಜನ್ ಸಿಲಿಂಡರ್, ವೆಂಟಿಲೇಟರ್ ಹಸ್ತಾಂತರ

ಕಲಬುರಗಿ,ಜೂ.11-ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯಲ್ಲಿ ಜನರಿಗೆ ಆಮ್ಲಜನಕಯುಕ್ತ ಬೆಡ್ ನೀಡುವ ಮೂಲಕ ಸೋಂಕಿನಿಂದ ಜನರನ್ನು ಕಾಪಾಡಿ ಜನಮನ ಸೆಳೆದಿರುವ ಧರ್ಮಸಿಂಗ್ ಫೌಂಡೇಶನ್ ಮೂರನೇ ಅಲೆಯ ಕೊರೊನಾ ಕಾಟವನ್ನು ಸಮರ್ಥವಾಗಿ ನಿರ್ವಹಿಸಲು ವಿದೇಶದಿಂದ ಆಮದುಮಾಡಿಕೊಳ್ಳಲಾಗಿರುವ 50 ಆಕ್ಸಿಜನ್ ಸಿಲಿಂಡರ್ 10 ಕೋವೆಂಟಿಲೇಟರ್ ಗಳನ್ನು ಜಿಲ್ಲಾಡಳಿತಕ್ಕೆ ಇಂದು ಹಸ್ತಾಂತರಿಸಿತು.
ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಜೇವರ್ಗಿ ಶಾಸಕ ಡಾ.ಅಜಯಸಿಂಗ್ ಅವರ ನೇತೃತ್ವದಲ್ಲಿ ಆಕ್ಸಿಜನ್ ಸಿಲಿಂಡರ್ ಹಾಗೂ ವೆಂಟಿಲೇಟರ್ ಗಳನ್ನು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರಿಗೆ ಹಸ್ತಾಂತರಿಸಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ, ಶಾಸಕ ಎಂ.ವೈ.ಪಾಟೀಲ, ಮಾಜಿ ಶಾಸಕ ಬಿ.ಆರ್.ಪಾಟೀಲ, ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಶರಣಪ್ಪ ಮಟ್ಟೂರ, ಮುಖಂಡರಾದ ಸುಭಾಷ ರಾಠೋಡ್, ಶರಣಕುಮಾರ ಮೋದಿ, ವಿಜಯಕುಮಾರ ಜಿ.ರಾಮಕೃಷ್ಣ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶರಣಬಸಪ್ಪ ಗಣಜಲಖೇಡ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ಕಾಂಗ್ರೆಸ್ ನಾಯಕರು ಈ ವೇಳೆ ಹಾಜರಿದ್ದರು.