ಧರ್ಮಸ್ಥಳದಲ್ಲಿ ಜರುಗಿದ ವ್ಯಸನಮುಕ್ತರ ಕುಟುಂಬೋತ್ಸವ ಸಮಾರಂಭ

ಅಫಜಲಪುರ:ಡಿ.10: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಧರ್ಮಸ್ಥಳ ಇವರ ಸಂಯುಕ್ತಾಶ್ರಯದಲ್ಲಿ ರಾಜ್ಯಾದ್ಯಂತ ನಡೆಸಲಾದ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಸಂತೃಪ್ತ ಜೀವನ ನಡೆಸುತ್ತಿರುವ ಹಾಗೂ ವೇದಿಕೆಯ ಯಶಸ್ವಿಗಾಗಿ ಯಾವುದೇ ಫಲಾಪೇಕ್ಷೆಯಿಲ್ಲದೆ ಶ್ರಮಿಸುತ್ತಿರುವ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಸಹಮಿಲನ ಹಾಗೂ ವ್ಯಸನಮುಕ್ತರ ಕುಟುಂಬೋತ್ಸವ ಸಮಾರಂಭವು ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಇತ್ತೀಚಿಗೆ ಜರುಗಿತು. ಸಮಾರಂಭಕ್ಕೆ ವಿಶೇಷ ಆಹ್ವಾನಿತರಾಗಿ ಅಫಜಲಪುರ ಪಟ್ಟಣದ ಮಳೇಂದ್ರ ಸಂಸ್ಥಾನ ಹಿರೇಮಠದ ಪೂಜ್ಯ ವಿಶ್ವಾರಾಧ್ಯ ಮಳೇಂದ್ರ ಶಿವಾಚಾರ್ಯರು ಭಾಗವಹಿಸಿ ಆಶೀರ್ವಚನ ನೀಡಿದರು ಹಾಗೂ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ವಿಶ್ವಾರಾಧ್ಯ ಮಳೇಂದ್ರ ಶಿವಾಚಾರ್ಯರಿಗೆ ಗೌರವಿಸಿ ಸತ್ಕರಿಸಿದರು.

ಈ ವೇಳೆ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ ಅಧ್ಯಕ್ಷರಾದ ಡಾ. ಹೇಮಾವತಿ ವಿ. ಹೆಗ್ಗಡೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಲ್.ಎಚ್ ಮಂಜುನಾಥ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲಬುರಗಿಯ ಜಿಲ್ಲಾ ಪ್ರಾದೇಶಿಕ ನಿರ್ದೇಶಕ ಸತೀಶ ಸುವರ್ಣ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.