ಧರ್ಮಸ್ಥಳ :ಸಾಮೂಹಿಕ ವಿವಾಹ ರದ್ದು

hindu wedding bride and groom celebrating wedding event with flower decorations

ಬೆಳ್ತಂಗಡಿ, ಏ.೨೨- ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಇದೇ ತಿಂಗಳು ೨೯ ರಂದು ಆಯೋಜಿಸಲಾಗಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿಗಳ ಆಪ್ತ ಕಾರ್ಯದರ್ಶಿ, ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನೋಂದಾಯಿಸಿಕೊಂಡಿರುವ ಎಲ್ಲ ಜೋಡಿಗಳು ತಮ್ಮ ಊರ ದೇವರ ಅಥವಾ ಕುಲದೇವರ ಸ್ಥಾನಗಳಲ್ಲಿ ಶಾಸ್ತ್ರೋಕ್ತವಾಗಿ ಏ.೨೯ ರಂದು ನಿಗದಿತವಾಗಿರುವ ಗೋಧೋಳಿ ಲಗ್ನದಲ್ಲಿ ಅಥವಾ ತಮಗೆ ಅನುಕೂಲವಾದ ದಿನಾಂಕ ಮತ್ತು ಮುಹೂರ್ತದಲ್ಲಿ ಮದುವೆ ಮಾಡಿಕೊಳ್ಳಬಹುದು ಎಂದು ತಿಳಿಸಿದ್ದಾರೆ.
ಇನ್ನು, ವಿವಾಹಕ್ಕೆ ನೋಂದಾಯಿಸಿಕೊಂಡಿರುವ ಜೋಡಿಗಳು ಕ್ಷೇತ್ರದ ವತಿಯಿಂದ ಆಶೀರ್ವಾದ ಪೂರ್ವಕವಾಗಿ ನೀಡಲಾಗುವ ವಿವಾಹ ಸಂಬಂಧಿ ವಸ್ತುಗಳಾದ ಧೋತಿ, ಸೀರೆ, ರವಿಕೆ ಕಣ, ಮಂಗಳಸೂತ್ರ ಇತ್ಯಾದಿಗಳನ್ನು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರ ಮುಖೇನ ವಧುವಿನ ಮನೆಗೆ ಮುಟ್ಟಿಸಲಾಗುವುದು ಎಂದು ಹೇಳಲಾಗಿದೆ.