ಧರ್ಮ ದೇಶ ಮನುಷ್ಯನ ಎರಡು ಕಣ್ಣು :  ರಂಭಾಪುರಿ ಶ್ರೀ

ಜಗಳೂರು.ಮಾ.೧೫; ವೈಚಾರಿಕತೆಯ ಬಿರುಗಾಳಿಯಲ್ಲಿ ಭಾರತೀಯ ಸಂಸ್ಕೃತಿ ನಾಶಗೊಳ್ಳಬಾರದು. ಧರ್ಮ ಮತ್ತು ದೇಶ ಮನುಷ್ಯನ ಎರಡು ಕಣ್ಣು ಇದ್ದಂತೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು  ತಾಲೂಕಿನ ಕೊಡದಗುಡ್ಡ ಶ್ರೀ ವೀರಭದ್ರೇಶ್ವರ ಸ್ವಾಮಿ ಹೆಸರಿನಲ್ಲಿ ನಿರ್ಮಿಸಿದ ಯಾತ್ರಿ ನಿವಾಸ ಉದ್ಘಾಟನೆ ಮತ್ತು ಕಲ್ಯಾಣ ಮಂಟಪದ ಶಿಲಾನ್ಯಾಸ ಅಂಗವಾಗಿ ಜರುಗಿದ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.ಭಗವಂತನಿತ್ತ ಸಂಪತ್ತು ನಿಜವಾದ ಸಂಪತ್ತು. ದೇವರು ಎಲ್ಲರಲ್ಲೂ ಇರುವನು. ಆದರೆ ಎಲ್ಲರೂ ದೇವರಲ್ಲಿ ಇಲ್ಲ. ಸಕಲ ಭೋಗ ಮೋಕ್ಷಗಳಿಗೆ ಧರ್ಮವೇ ಮೂಲ. ಸುಖದ ಮೂಲ ಧರ್ಮಾಚರಣೆಯಲ್ಲಿದೆ. ಪರಿಪೂರ್ಣದೆಡೆಗೆ ಕರೆದೊಯ್ಯುವುದೇ ನಿಜವಾದ ಧರ್ಮ. ಬಾಳಿನ ಭಾಗ್ಯೋದಯಕ್ಕೆ ಧರ್ಮದ ಬೆಳಕು ಬೇಕು. ಸಮರ ಜೀವನ ಅಮರ ಜೀವನವಾಗಲು ಸಂಸ್ಕಾರ ಸದ್ವಿಚಾರಗಳ ಅವಶ್ಯಕತೆಯಿದೆ. ಜೀವನ ಮೌಲ್ಯಗಳನ್ನು ಸಂಪಾದಿಸಿಕೊAಡು ಸನ್ಮಾರ್ಗದಲ್ಲಿ ನಡೆಯುವುದೇ ನಿಜವಾದ ಧರ್ಮ ಎಂದು ಶ್ರೀ ಜಗದ್ಗುರು ರೇಣುಕಾಚಾರ್ಯರು ಸಿದ್ಧಾಂತ ಶಿಖಾಮಣಿ ಧರ್ಮ ಗ್ರಂಥದಲ್ಲಿ ನಿರೂಪಿಸಿದ್ದಾರೆ. ಮನುಷ್ಯನಿಗೆ ಹೆತ್ತ ತಾಯಿ ಹೊತ್ತ ನೆಲ ಎಷ್ಟು ಮುಖ್ಯವೋ ಅಷ್ಟೇ ಧರ್ಮವೂ ಮುಖ್ಯವೆಂಬುದನ್ನು ಮರೆಯಬಾರದು. ಕೊಡದಗುಡ್ಡ ಶ್ರೀ ವೀರಭದ್ರೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿರುವುದು ತಮಗೆ ಅತೀವ ಸಂತೋಷ ತಂದಿದೆ ಎಂದರು.ಸಾನ್ನಿಧ್ಯ ವಹಿಸಿದ ಶ್ರೀ ಹಿಮವತ್ಕೇದಾರ ಜಗದ್ಗುರು ರಾವಲ್ ಪದವಿಭೂಷಿತ ಶ್ರೀ ಭೀಮಾಶಂಕರಲಿAಗ ಶಿವಾಚಾರ್ಯ ಭಗವತ್ಪಾದರು ತಮ್ಮ ಆಶೀರ್ವಚನದಲ್ಲಿ ಧರ್ಮದ ದಿಕ್ಸೂಚಿ ಇಲ್ಲದೇ ಇದ್ದರೆ ಬದುಕಿಗೆ ಅರ್ಥವೇ ಇಲ್ಲ. ಸಮೃದ್ಧ ಸದೃಢ ನಾಡು ಕಟ್ಟುವುದೇ ಧರ್ಮ ಪೀಠಗಳ ಗುರಿಯಾಗಿದೆ. ಶಿವಾಗಮಗಳು ವೀರಶೈವ ಧರ್ಮ ಸಾಹಿತ್ಯದ ಮೂಲ ಬೇರುಗಳು. ಜೀವನದ ಜಂಜಡದಲ್ಲಿ ಸಿಲುಕಿರುವ ಮನುಷ್ಯನಿಗೆ ಪುಣ್ಯ ಕ್ಷೇತ್ರಗಳು ಸ್ಫೂರ್ತಿ ಮತ್ತು ಚೈತನ್ಯವನ್ನು ನೀಡುವ ಕೇಂದ್ರಗಳಾಗಿವೆ ಎಂದರು. ನೇತೃತ್ವ ವಹಿಸಿದ ಕಣ್ವಕುಪ್ಪೆ ಗವಿಮಠದ ಡಾ.ನಾಲ್ವಡಿ ಶಾಂತಲಿAಗ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ಸಂವೇದನಾಶೀಲ ಜೀವನಕ್ಕೆ ವೀರಶೈವ ಧರ್ಮ ಕೊಟ್ಟ ಕೊಡುಗೆ ಅಪಾರವಾದುದು. ವ್ಯಕ್ತಿತ್ವ ವಿಕಸನಗೊಳ್ಳಲು ಗುರು ಮತ್ತು ಗುರಿ ಮುಖ್ಯವೆಂದರು. ್ಲ ರಾಮಘಟ್ಟ ಪುರವರ್ಗ ಮಠದ ರೇವಣಸಿದ್ಧ ಶಿವಾಚಾರ್ಯ ಸ್ವಾಮಿಗಳು, ಹಾಗೂ ಶಿರಾಳಕೊಪ್ಪದ ಸಿದ್ಧೇಶ್ವರ ದೇವರು ಸಮಾರಂಭದಲ್ಲಿ ಪಾಲ್ಗೊಂಡು ವೀರಶೈವ ಧರ್ಮದ ಧಾರ್ಮಿಕ ಮತ್ತು ಸಾಮಾಜಿಕ ಮೌಲ್ಯಗಳನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲರದು ಆಗಿದೆ ಎಂದರು.