ಧಾರವಾಡ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಿಂದ ಸಭೆ

ಹುಬ್ಬಳ್ಳಿ ನ 3 : ನಾಳೆ ನಡೆಯಲಿರುವ ನವಲಗುಂದ ಪುರಸಭೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣೆ ಅಂಗವಾಗಿ ಹುಬ್ಬಳ್ಳಿಯ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಜಿಲ್ಲಾಧ್ಯಕ್ಷರಾದ ಅನೀಲ್ ಕುಮಾರ್ ಪಾಟೀಲ್ ರವರ ಅಧ್ಯಕ್ಷತೆಯಲ್ಲಿ ನವಲಗುಂದ ಪುರಸಭೆ ಸದಸ್ಯರು ಹಾಗೂ ಮುಖಂಡರೊಂದಿಗೆ ಸಭೆ ನಡೆಸಿ ಚುನಾವಣಾ ರೂಪುರೇಷೆ ಬಗ್ಗೆ ಚರ್ಚೆ ನಡೆಸಿದರು.
ಈ ಸಂಧರ್ಭದಲ್ಲಿ ಎಲ್ಲ ಸದಸ್ಯರು ಒಮ್ಮತದಿಂದ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ ಇರುತ್ತೇವೆ.
ಅಲ್ಲದೇ ಅಧಿಕಾರಕ್ಕಾಗಿ ಕೋಮುವಾದಿ ಪಕ್ಷವಾದ ಬಿಜೆಪಿಯೊಂದಿಗೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಈ ಸಭೆಯಲ್ಲಿ ಮಾಜಿ ಸಚಿವರಾದ ಕೆ. ಎನ್.ಗಡ್ಡಿ, ಧಾರವಾಡ ಗ್ರಾಮೀಣ ಜಿಲ್ಲಾ ಯವ ಕಾಂಗ್ರೆಸ್ ಅಧ್ಯಕ್ಷ ವಿನೋದ ಅಸೋಟಿ, ನವಲಗುಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವರ್ಧಮಾನ್ ಹಿರೇಗೌಡರ್ ಹಾಗೂ ಕಾಂಗ್ರೆಸ್ ಪಕ್ಷದ ಪುರಸಭೆಯ ಎಲ್ಲ ಸದಸ್ಯರು ಉಪಸ್ಥಿತರಿದ್ದರು.