ಧಾರವಾಡ: ತರಬೇತಿ ಕಾರ್ಯಾಗಾರ

ಧಾರವಾಡ,ಏ14: ಧಾರವಾಡ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಮೇ 7 ರಂದು ಮತದಾನ ಜರುಗಲಿದ್ದು, ಅಂದು ಜಿಲ್ಲೆಯ 1660 ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸಲು ಒಟ್ಟು 4477 ಜನ ಪಿಆರ್.ಓ ಮತ್ತು ಎಪಿಆರ್.ಓ ಗಳಿಗೆ ಜಿಲ್ಲೆಯ ಏಳು ಸ್ಥಳಗಳಲ್ಲಿ ಇಂದು ಯಶಸ್ವಿಯಾಗಿ ಮೊದಲ ಹಂತದ ತರಬೇತಿ ನೀಡಲಾಯಿತು ಎಂದು ಧಾರವಾಡ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ತರಬೇತಿ ಸ್ಥಳಗಳಿಗೆ ಸ್ವತಃ ಭೇಟಿ ನೀಡಿ, ತರಬೇತಿಗೆ ಆಗಮಿಸಿದ್ದ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಚುನಾವಣಾ ಕರ್ತವ್ಯ ನಿರ್ವಹಣೆ ಕುರಿತು ನಾನು ಸಂವಾದ ಮಾಡಿದ್ದೇನೆ. ಸೆಕ್ಟರ್ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಮೊದಲ ಹಂತದ ತರಬೇತಿ ನೀಡಿದ್ದಾರೆ. ಪ್ರತಿ ತರಬೇತಿ ಸ್ಥಳದ ನೇತೃತ್ವವಹಿಸಿದ್ದ ಸಹಾಯಕ ಚುನಾವಣಾಧಿಕಾರಿಗಳು ಪಿಆರ್.ಓ ಮತ್ತು ಎಪಿಆರ್.ಓಗಳ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ತಿಳಿಸಿ, ಪ್ರಾಯೋಗಿಕ ತರಬೇತಿ ನೀಡಿದ್ದಾರೆ. ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಎಲ್ಲ ಪಿಆರ್.ಓ ಮತ್ತು ಎಪಿಆರ್.ಓಗಳಿಗೆ ಮೇ ತಿಂಗಳ ಮೊದಲ ವಾರದಲ್ಲಿ ಎರಡನೇಯ ಹಂತದ ತರಬೇತಿ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಮತಗಟ್ಟೆ ಅಧ್ಯಕ್ಷಾಧಿಕಾರಿ (ಪಿ.ಆರ್ ಓ) ಮತ್ತು ಸಹಾಯಕ ಮತಗಟ್ಟೆ ಅಧ್ಯಕ್ಷಾಧಿಕಾರಿಗಳಿಗೆ, ನವಲಗುಂದ-69 ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ದೇವರಾಜ್ ಆರ್. ಅವರ ನೇತೃತ್ವದಲ್ಲಿ ತರಬೇತಿಯನ್ನು ನವಲಗುಂದ ಪಟ್ಟಣದ ಶ್ರೀ ಶಂಕರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ, ಕುಂದಗೋಳ-70 ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ರುದ್ರೇಶ ಗಾಳಿ ಅವರ ನೇತೃತ್ವದಲ್ಲಿ ತರಬೇತಿಯನ್ನು ಕುಂದಗೋಳ ಪಟ್ಟಣದ ಶ್ರೀ ಹರಭಟ್ಟ ಪಿಯು ಕಾಲೇಜದಲ್ಲಿ, ಧಾರವಾಡ-71 ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಶಾಲಂ ಹುಸೇನ್ ಅವರ ಹಾಗೂ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರ ನೇತೃತ್ವದಲ್ಲಿ ತರಬೇತಿಯನ್ನು ಧಾರವಾಡ ನಗರದ ವಿದ್ಯಾಗಿರಿಯ ಬನಶಂಕರಿ ಆಟ್ರ್ಸ ಮತ್ತು ಕಾಮರ್ಸ್ ವಿಜ್ಞಾನ ಕಾಲೇಜು ಮತ್ತು ಶಾಂತಿಕುಮಾರ ಗುಬ್ಬಿ ವಿಜ್ಞಾನ (ಜೆ.ಎಸ್.ಎಸ್. ಆವರಣ)ಕಾಲೇಜದಲ್ಲಿ, ಹುಬ್ಬಳ್ಳಿ-ಧಾರವಾಡ ಪೂರ್ವ-72 ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ವಿನೋದ ಹೆಗ್ಗಳಗಿ ಅವರ ನೇತೃತ್ವದಲ್ಲಿ ತರಬೇತಿಯನ್ನು ಹುಬ್ಬಳ್ಳಿ ನಗರದಲ್ಲಿನ ವಿದ್ಯಾನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುದಲ್ಲಿ, ಹುಬ್ಬಳ್ಳಿ-ಧಾರವಾಡ ಕೇಂದ್ರ-73 ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ ಅವರ ನೇತೃತ್ವದಲ್ಲಿ ತರಬೇತಿಯನ್ನು ಹುಬ್ಬಳ್ಳಿಯ ಲ್ಯಾಮಿಂಗ್‍ಟನ್ ಬಾಯ್ಸ್ ಮತ್ತು ಗಲ್ರ್ಸ ಸ್ಕೂಲ್‍ದಲ್ಲಿ, ಹುಬ್ಬಳ್ಳಿ-ಧಾರವಾಡ ಪಶ್ಚಿಮ-74 ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಪ್ರಯಾಂಗಾ ಎಂ. ಅವರ ನೇತೃತ್ವದಲ್ಲಿ ತರಬೇತಿಯನ್ನು ಧಾರವಾಡ ವಿದ್ಯಾಗಿರಿಯ ಜೆ.ಎಸ್.ಎಸ್. ಕಾಲೇಜಿನ ಯುಜಿ ಮತ್ತು ಪಿಜಿ ಕೇಂದ್ರದಲ್ಲಿ, ಕಲಘಟಗಿ-75 ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಸಿದ್ದು ಹುಳ್ಳೊಳ್ಳಿ ಅವರ ನೇತೃತ್ವದಲ್ಲಿ ತರಬೇತಿಯನ್ನು ಕಲಘಟಗಿ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ನೀಡಲಾಯಿತು.
ಧಾರವಾಡ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಹಾವೇರಿ ಜಿಲ್ಲೆಯ ಶಿಗ್ಗಾಂವ-83 ವಿಧಾನ ಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಮೊಹಮ್ಮದ ಕೈಸರ್ ನೇತೃತ್ವದಲ್ಲಿ ಕಳೆದ ಏಪ್ರೀಲ್ 10, 2024 ರಂದು ಶಿಗ್ಗಾಂವ ಪಟ್ಟಣದ ಜೆಎಂಜೆ ಸ್ಕೂಲ್ ದಲ್ಲಿ ಶಿಗ್ಗಾಂವ ಮತಕ್ಷೇತ್ರ ವ್ಯಾಪ್ತಿಯ 241 ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸಲು ನಿಯೋಜನೆಗೊಂಡಿರುವ 664 ಜನ ಪಿಆರ್.ಓ ಮತ್ತು ಎಪಿಆರ್.ಓಗಳಿಗೆ ತರಬೇತಿಯನ್ನು ನೀಡಲಾಗಿದೆ ಎಂದು ಧಾರವಾಡ ಜಿಲ್ಲಾ ಚುನಾವಣಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.