ಧಾರವಾಡ,ಜೂ.27: ಉತ್ತರ ಕರ್ನಾಟಕ ಭಾಗದ ಬಹುನಿರೀಕ್ಷಿತ ವಂದೇ ಭಾರತ ಎಕ್ಸ್‍ಪ್ರೆಸ್ ರೈಲಿಗೆ ಇಂದು ವಿದ್ಯುಕ್ತವಾಗಿ ಚಾಲನೆ ದೊರೆತಿದೆ.
ಒಟ್ಟು ಐದು ರೈಲುಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಭೋಪಾಲ್‍ನ ರಾಣಿ ಕಮಮಲಪತಿ ನಿಲ್ದಾಣದಲ್ಲಿ ವಿಡಿಯೋ ಕಾನ್ಫರನ್ಸ್ ಮೂಲಕ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದ್ದಾರೆ. ಅದರಲ್ಲಿ ಧಾರವಾಡ ಬೆಂಗಳೂರು ವಂದೇ ಭಾರತ ಎಕ್ಸ್‍ಪ್ರೆಸ್ ರೈಲು ಕೂಡ ಒಂದು.
ಧಾರವಾಡದ ರೈಲು ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ವೇದಿಕೆ ಕಾರ್ಯಕ್ರಮದ ನಂತರ ಧಾರವಾಡ ಬೆಂಗಳೂರು ವಂದೇ ಭಾರತ ರೈಲಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕರಾದ ಅರವಿಂದ ಬೆಲ್ಲದ, ಎಸ್.ವಿ.ಸಂಕನೂರ ಅವರು ಚಾಲನೆ ನೀಡಿದರು.
ಧಾರವಾಡದಿಂದ ಹೊರಟ ವಂದೇ ಭಾರತ ಎಕ್ಸ್‍ಪ್ರೆಸ್ ರೈಲು ಹುಬ್ಬಳ್ಳಿ ಮೂಲಕ ಬೆಂಗಳೂರಿನತ್ತ ಪ್ರಯಾಣ ಬೆಳೆಸಿತು. ಸ್ವತಃ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕರಾದ ಅರವಿಂದ ಬೆಲ್ಲದ, ಎಸ್.ವಿ.ಸಂಕನೂರ ಕೂಡ ವಂದೇ ಭಾರತ ರೈಲಿನಲ್ಲಿ ಕಡೆಗೆ ಪ್ರಯಾಣ ಬೆಳೆಸಿ ಗಮನಸೆಳೆದರು.