ಧಾರಾಕಾರ ಮಳೆ ಸುರಿದು ಭತ್ತ ಹಾನಿ:

ದಾವಣಗೆರೆ.ಮೇ.೨೩; ಜಿಲ್ಲೆಯಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾನುವಾರ ರಾತ್ರಿ ಸುರಿದ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಕೊಯ್ಲಿಗೆ ಬಂದಿದ್ದ ಭತ್ತ ಕೈಗೆ ಸಿಗದಂತಾಗಿ ಅಪಾರ ನಷ್ಟ ಸಂಭವಿಸಿದೆ.ಮಾಯಕೊAಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೊಲ್ಕುಂಟೆ, ತೋಗಲೇರಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಲಕ್ಷಾಂತರ ರೂ. ಮೌಲ್ಯದ ಕೊಯಿಲಿಗೆ ಬಂದ ಭತ್ತ ನಷ್ಟ ಸಂಭವಿಸಿದ್ದು, ಸುದ್ದಿ ತಿಳಿದ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಅಧಿಕಾರಿಗಳಿಗೆ ಕೂಡಲೇ ಸ್ಥಳಕ್ಕೆ ಧಾವಿಸಿ ನಷ್ಟವಾಗಿರುವ ಭತ್ತದ ಹಾನಿ ಬಗ್ಗೆ ತಯಾರಿಸಿ ನಷ್ಟಕ್ಕೊಳಗಾದ ರೈತರಿಗೆ ಪರಿಹಾರ ಕೊಡಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಬೆಂಗಳೂರಿನ ವಿಧಾನಸೌಧದಲ್ಲಿ  ಮೊದಲ ಅಧಿವೇಶನ ಮತ್ತು ಶಾಸಕರಿಗೆ ಪ್ರಮಾಣ ವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ  ರೈತರನ್ನು ಭೇಟಿ ಮಾಡಲು ಆಗಿಲ್ಲ. ಆದರೂ ನಾನು ನಮ್ಮ ಕ್ಷೇತ್ರದ ರೈತಪರ ಕಾಳಜಿ ಹೊಂದಿರುವುದರಿAದ ಸುದ್ದಿ ತಿಳಿದ ಕೂಡಲೇ ಸಂಬAಧಪಟ್ಟ ಅಧಿಕಾರಿಗಳಿಗೆ ಹಾನಿಯಾಗಿರುವ ಭತ್ತದ ಹಾನಿ ಹಾಗೂ ಅಂದಾಜು ನಷ್ಟವನ್ನು ತಯಾರಿಸಿ ರೈತರಿಗೆ ಪರಿಹಾರ ವಿತರಿಸಬೇಕೆಂದು ಸೂಚನೆ ನೀಡಿದ್ದೇನೆ. ಅಧಿವೇಶನ ಮುಗಿದ ಕೂಡಲೇ ಬೆಂಗಳೂರಿನಿAದ ಕ್ಷೇತ್ರಕ್ಕೆ ಹಿಂದಿರುಗಿ ನಷ್ಟಕ್ಕೊಳಗಾಗಿರುವ ಗ್ರಾಮಗಳಿಗೆ ತೆರಳಿ ರೈತರಿಗೆ ಸಮಸ್ಯೆಗಳನ್ನು ಆಲಿಸುವ ಕೆಲಸ ಮಾಡುತ್ತೇನೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ರೈತರಿಗೆ ಧೈರ್ಯ ತುಂಬಿದ್ದಾರೆ.