ಧ್ರುವನಾರಾಯಣ್‌ ನಿಧನ – ಪ್ರಜಾಧ್ವನಿ ಯಾತ್ರೆ ರದ್ದು

ಹರಿಹರ. ಮಾ .12 ;  ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌  ನಿಧನದ ಹಿನ್ನೆಲೆಯಲ್ಲಿಂದು‌ ಮಹಾತ್ಮ ಗಾಂಧಿ ಕ್ರೀಡಾಂಗಣ ಮೈದಾನದಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ಶಾಸಕ ಎಸ್ ರಾಮಪ್ಪ ತಿಳಿಸಿದರುಹೊನ್ನಾಳಿ ಮತ್ತು ಹರಿಹರದಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ನಿಧನದ ಕಾರಣ ಮಾರ್ಚ್ 13ಕ್ಕೆ ಮುಂದೂಡಲಾಗಿದೆ.ಶಾಸಕರು ಸಂಸದರಾಗಿ ಕಳೆದ 2 ವರ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ ಸರಳ ಸಜ್ಜನ ರಾಜಕಾರಣಿಯಾಗಿದ್ದ ಧ್ರುವನಾರಾಯಣ್ ಅವರ ನಿಧನದಿಂದ ಕರ್ನಾಟಕ ರಾಜ್ಯದ ಒಬ್ಬ ಅತ್ಯುತ್ತಮ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಅವರ ನಿಧನದಿಂದ ಆಗಿರುವ ದುಃಖವನ್ನು ಶಕ್ತಿಯನ್ನು ಅವರ ಕುಟುಂಬ ಹಾಗೂ ಅವರ ಅಭಿಮಾನಿಗಳಿಗೆ ದಯಪಾಲಿಸಲಿ  ಎಂದು ಹೇಳಿದರು