ಧ್ರುವನಾರಾಯಣ ಶ್ರೇಷ್ಠ ಸಂಸದೀಯಪಟು


ಸಂಜೆವಾಣಿ ವಾರ್ತೆ
ಹೂವಿನಹಡಗಲಿ, ಮಾ.12 : ಅಕಾಲಿಕ ನಿಧನರಾದ ಮಾಜಿ ಸಂಸದ ಆರ್.ಧ್ರುವನಾರಾಯಣ ಅವರಿಗೆ ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದಿಂದ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಧ್ರುವನಾರಾಯಣ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಸಂತಾಪ ವ್ಯಕ್ತಪಡಿಸಲಾಯಿತು. ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಮಾತನಾಡಿ, ಶ್ರೇಷ್ಠ ಸಂಸದೀಯ ಪಟುವಾಗಿದ್ದ ಧ್ರುವನಾರಾಯಣ ಅವರು ಮಾದರಿ ನಾಯಕರಾಗಿದ್ದರು. ಅವರ ಅಗಲಿಕೆಯಿಂದ ಕಾಂಗ್ರೆಸ್ ಪಕ್ಷ ಮತ್ತು ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಜ್ಯೋತಿ ಮಲ್ಲಣ್ಣ, ಮುಖಂಡರಾದ ಅಟವಾಳಗಿ ಕೊಟ್ರೇಶ, ಬಿ.ಹನುಮಂತಪ್ಪ, ಜಿ.ವಸಂತ, ಕೆ.ಪತ್ರೇಶ ಇತರರು ಇದ್ದರು.