ನಂಜನಗೂಡಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ನಂಜನಗೂಡು: ನ.07:- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು 9ನೇ ತಾರೀಕು ನಂಜನಗೂಡು ತಾಲೂಕು ಹೊಸವೀಡು ಗ್ರಾಮದಲ್ಲಿ ನಿರ್ಮಾಣವಾಗಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹು ಳ್ಳಹಳ್ಳಿ ಸರ್ಕಲ್ ಬಳಿ ಅದ್ದೂರಿ ಸ್ವಾಗತ ಮಾಡಲು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಬ್ಲಾಕ್ ಅಧ್ಯಕ್ಷರು ಗಳು ಸಮ್ಮುಖದಲ್ಲಿ ಸಭೆ ನಡೆಸಿ ಕಾರ್ಯಕ್ರಮದ ಬಗ್ಗೆ ಚರ್ಚಿಸಲಾಯಿತು
ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ ನಮ್ಮ ಪಕ್ಷದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರಿನಿಂದ ನಂಜನಗೂಡಿನ ಮಾರ್ಗವಾಗಿ ಹೊಸವೀಡು ಗ್ರಾಮಕ್ಕೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಅದ್ದೂರಿ ಸ್ವಾಗತ ಮಾಡಲು ಸಕಲ ಸಿದ್ಧತೆ ನಡೆಯುತ್ತಿದೆ ಪಕ್ಷದ ಕಾರ್ಯಕರ್ತರು ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಬರಲು ಸೂಚನೆ ನೀಡಿದ್ದೇವೆ ಉಳ್ಳ ಹಳ್ಳಿ ಸರ್ಕಲ್ ನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಖಂಡರು ಬ್ಲಾಕ್ ಅಧ್ಯಕ್ಷರುಗಳು ಹಾಗೂ ಬೈಕ್ ರ್ಯಾಲಿ ಮೂಲಕ ಕಾರ್ಯಕರ್ತರು ಸ್ವಾಗತಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ
ಇದಲ್ಲದೆ ಹೋಗುವ ಮಾರ್ಗದಲ್ಲಿ ಸಿಗುವ ಪ್ರತಿ ಗ್ರಾಮಗಳಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕೂಡ ಸ್ವಾಗತಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ ಈ ಸಂದರ್ಭದಲ್ಲಿ ತಿಳಿಸಿದರು
ಈ ಪೂರ್ವಭಾವಿ ಸಭೆಯಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸವರಾಜ ಬ್ಲಾಕ್ ಅಧ್ಯಕ್ಷರಾದ ಕುರಹಟ್ಟಿ ಮಹೇಶ್ ಸಿಎಂ ಶಂಕರ್ ಓಬಿಸಿ ಕಾರ್ಯದರ್ಶಿ ನಾಗರಾಜ್ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಮಾರುತಿ ಸೇರಿದಂತೆ ಪಕ್ಷದ ಮುಖಂಡರುಗಳು ಕಾರ್ಯಕರ್ತರು ಭಾಗವಹಿಸಿದರು