ನಂಜನಗೂಡು ನಗರಸಭೆ: ಅಧ್ಯಕ್ಷ – ಉಪಾಧ್ಯಕ್ಷರ ಅಧಿಕಾರ ಸ್ವೀಕಾರ

ನಂಜನಗೂಡು, ನ.5: ನಗರಸಭೆ ಕಚೇರಿಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಮಹದೇವಸ್ವಾಮಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು ಮತ್ತು ಉಪಾಧ್ಯಕ್ಷರಾಗಿ ನಾಗಮಣಿ ಅವರು ಅಧಿಕಾರ ಸ್ವೀಕರಿಸಿದರು.
ಶಾಸಕ ಹರ್ಷವರ್ಧನ್ ಅಧ್ಯಕ್ಷ ಉಪಾಧ್ಯಕ್ಷ ಕಚೇರಿಯನ್ನು ಉದ್ಘಾಟಿಸಿದರು.
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಮಾತನಾಡಿ ಮೊದಲು ನಗರದ ಸ್ವಚ್ಛತೆಗೆ ಮತ್ತು ಕುಡಿಯುವ ನೀರಿಗೆ ಪ್ರಾಮುಖ್ಯತೆ ನೀಡುತ್ತೇನೆ. ಇದಲ್ಲದೆ ಪ್ಲಾಸ್ಟಿಕ್ ಮುಕ್ತ ಮಾಡಲು ಪ್ರಯತ್ನ ಮಾಡುತ್ತೇನೆ. ಸಾರ್ವಜನಿಕರ ಕೆಲಸಗಳನ್ನು ಸರಿಯಾದ ಸಮಯದಲ್ಲಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸುತ್ತೇನೆ ಸಾರ್ವಜನಿಕರು ತಮ್ಮ ಕೆಲಸಗಳಿಗೆ ಕಚೇರಿಗೆ ಅಲೆದಾಡುವುದು ಗಮನಕ್ಕೆ ಬಂದಿದೆ ಇದರ ಬಗ್ಗೆ ಹೆಚ್ಚಿನ ಗಮನ ಕೊಡುತ್ತೇನೆ ಮುಂದಿನ ದಿನಗಳಲ್ಲಿ ಹಂತಹಂತವಾಗಿ ಅಧ್ಯಕ್ಷರಾಗಿ ನಾನು ಉಪಾಧ್ಯಕ್ಷರಾದ ನಾಗಮಣಿ ಮತ್ತು ಪಕ್ಷಭೇದ ಮರೆತು ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮ ಕೆಲಸ ಮಾಡಲು ಸಹಕರಿಸುತ್ತದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು
ಈ ಕಾರ್ಯಕ್ರಮದಲ್ಲಿ ನಗರಸಭೆ ಆಯುಕ್ತ ಕರಿಬಸವಯ್ಯ ನಗರಸಭಾ ಕಚೇರಿಯ ಎಲ್ಲ ಅಧಿಕಾರಿಗಳು ಬಿಜೆಪಿ ಜೆಡಿಎಸ್ ಕಾಂಗ್ರೆಸ್ ಪಕ್ಷದ ಎಲ್ಲಾ ಚುನಾಯಿತ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.