ಕಲಬುರಗಿ,ಜೂ.28:ಕಲಬುರಗಿ ತಾಲೂಕು ಪಂಚಾಯತ್‍ನ (GSÁ) ಸಹಾಯಕ ನಿರ್ದೇಶಕ ರೇವಣಸಿದ್ದಪ್ಪ ಗೌಡರ ಇವರ ನೇತೃತ್ವದಲ್ಲಿ ಕಲಬುರಗಿ ತಾಲೂಕಿನ ನಂದಿಕೂರ ಗ್ರಾಮದಲ್ಲಿ ಕೂಲಿ ಕಾರ್ಮಿಕರರಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಬುಧವಾರ ಹಮ್ಮಿಕೊಳ್ಳಲಾಯಿತು.
ಗ್ರಾಮ ಪಂಚಾಯಿತಿಯಲ್ಲಿ ಪ್ರಸ್ತುತ ಚಾಲ್ತಿಯಲ್ಲಿನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿ ಸ್ಥಳದಲ್ಲಿಯೇ ಆರೋಗ್ಯ ಅಮೃತ ಅಭಿಯಾನದಡಿ ಅವರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ 45 ಜನ ಮಹಿಳೆಯರು ಹಾಗೂ 35 ಜನ ಪುರುಷರು ಸೇರಿದಂತೆ ಒಟ್ಟು 80 ಜನ ಕೂಲಿ ಕಾರ್ಮಿಕರ ಗ್ರಾಮ ಆರೋಗ್ಯ ಶಿಬಿರಗಳನ್ನು ಅಯೋಜಿಸಿ, ಅವರಿಗೆ ರಕ್ತದ ಒತ್ತಡ, ಶುಗರ್, ರಕ್ತ ಪರೀಕ್ಷೆ, ಕಣ್ಣಿನ ಪರೀಕ್ಷೆ ಹಲ್ಲು ಪರೀಕ್ಷೆ ಸೇರಿದಂತೆ ಮತ್ತಿತರ ಪರೀಕ್ಷೆಗಳನ್ನು ಮಾಡಲಾಯಿತು.
ಕಲಬುರಗಿ ತಾಲೂಕು ಪಂಚಾಯತ್ ಐಈಸಿ ಸಂಯೋಜಕ ಮೋಸಿನ ಖಾನ್, ಗ್ರಾಮ ಪಂಚಾಯತಿಯ ಅಧ್ಯಕ್ಷರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಮಚಂದ್ರ ಮಸರ್‍ಕಲ್, ಬಿಲ್ ಕಲೆಕ್ಟರ್ ಶಾಂತಯ್ಯ ಹಿರೇಮಠ ಸೇರಿದಂತೆ ಇತರೆ ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.