ನಂದಿನಿ ಬ್ರ್ಯಾಂಡ್ ಹಾಳುಗೆಡವಲು ಸಂಚು: ನಾಟೀಕಾರ

ಕಲಬುರಗಿ: ಎ.9:ಗುಜರಾತಿನ ಅಮುಲ್ ರಾಜ್ಯದ ಹಾಲು ಉತ್ಪಾದಕರ ಅನ್ನ ಕಸಿದುಕೊಳ್ಳುತ್ತಿದೆ , ನಂದಿನಿ ಬ್ರ್ಯಾಂಡ್ ಹಾಳುಗೆಡವಲು ವ್ಯವಸ್ಥಿತ ಸಂಚು ನಡೆಸುತ್ತಿದ್ದಾರೆ ಎಂದು ಕರವೇ (ಪ್ರವೀಣ ಶೆಟ್ಟಿ ಬಣದ) ಕಲ್ಯಾಣ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಗೋಪಾಲ ನಾಟೀಕಾರ ಆರೋಪಿಸಿದರು. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ಕರ್ನಾಟಕಕ್ಕೆ ಋಣಿಯಾಗಿರಬೇಕಾದ ಅಮುಲ್ ಕೆಎಂಎಪ್ ಗೆ ಅನಾರೋಗ್ಯಕರ ಪೈಪೆÇೀಟಿ ಒಡ್ಡುವ ಮೂಲಕ ಸಹಕಾರ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ.ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ 3 ನೇ ಸಂಚು ನಡೆದಿದೆ.ಅಮುಲ್ ಜೊತೆ ನಂದಿನಿಯನ್ನು ವಿಲಿನ ಮಾಡುವ ಕೇಂದ್ರ ಗೃಹ ಸಚಿವ ಅಮಿತ ಶಾ ಹೇಳಿಕೆ ಮೊದಲ ಸಂಚು.ಮೊಸರು ಪ್ಯಾಕೆಟ್ ಮೇಲೆ ಹಿಂದಿಯ “ದಹಿ” ಪದ ಮುದ್ರಣ ಎರಡನೇ ಸಂಚು.ಕನ್ನಡಿಗರ ತೀವ್ರ ವಿರೋಧದಿಂದ ಎರಡು ಸಂಚುಗಳು ವಿಫಲವಾಗಿವೆ.ಮೂರನೇ ಸಂಚು ಸಫಲಗೊಳಿಸಲು ಅಮುಲ್ ಮೂಲಕ ಕೇಂದ್ರ ಸರಕಾರ ಹೊರಟಿದೆ ಎಂದು ಆರೋಪಿಸಿದ್ದಾರೆ.ತನ್ನ ಏಕೈಕ ಪ್ರತಿಸ್ಪರ್ದಿ ನಂದಿನಿಗೆ ಕರ್ನಾಟಕದಲ್ಲೇ ಅಡ್ಡಿ ಮಾಡಬೇಕೆನ್ನುವುದು ಅಮುಲ್ ದುರಾಲೋಚನೆ. ಒಂದು ದೇಶ,ಒಂದು ಅಮುಲ್,ಒಂದೇ ಹಾಲು,ಒಂದೇ ಗುಜರಾತ್ ಎನ್ನುವುದು ಕೇಂದ್ರ ಸರ್ಕಾರದ ಅಧಿಕೃತ ನೀತಿಯಂತಿದೆ.ಅದಕ್ಕೆ ಅಮುಲ್ ಗೆ ಒತ್ತಾಸೆಯಾಗಿ ನಿಂತು ಕೆಎಂಎಪ್ ಕತ್ತು ಹಿಚುಕುತ್ತಿದೆ.ಈಗ ಅಮುಲ್ ಹಿಂಬಾಗಿಲ ಮೂಲಕ
ಒಳನುಗ್ಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.