
ಬೆಂಗಳೂರು, ಜು.21-ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರ, ಆಗಸ್ಟ್ 1ರಿಂದಲೇ ಪರಿಷ್ಕೃತ ದರ ಜಾರಿಗೊಳಿಸಲಿದೆ.
ಪ್ರತಿ ಲೀಟರ್ಗೆ ಹಾಲಿಗೆ 5 ರೂ. ಹೆಚ್ಚಳಕ್ಕೆ ಕೆ.ಎಂ.ಎಫ್ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಅಂತಿಮವಾಗಿ 3 ರೂಪಾಯಿ ಹೆಚ್ಚಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.
ಇನ್ನೂ, ಶುಕ್ರವಾರ ಸಂಜೆ ನಡೆದ ಸಭೆಯಲ್ಲಿ ಪಶುಸಂಗೋಪನ ಇಲಾಖೆ ಸಚಿವ ಕೆ.ವೆಂಕಟೇಶ್, ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್, ಆಡಳಿತ ಮಂಡಳಿ ಸದಸ್ಯರು ಮತ್ತು ಕೆಎಂಎಫ್ ಅಧಿಕಾರಿಗಳು ಭಾಗವಹಿಸಿದ್ದರು.
ಈ ಕುರಿತು ಪ್ರತಿಕ್ರಿಯಿಸಿದ ಕೆ.ಎಂ.ಎಫ್ ಅಧ್ಯಕ್ಷ ಭೀಮಾ ನಾಯ್ಕ್ , 5 ರೂ. ಹೆಚ್ಚಳ ಮಾಡುವಂತೆ ರೈತರ ಒಕ್ಕೂಟದ ಬೇಡಿಕೆ ಇತ್ತು. ಇದೀಗ 3 ರೂ. ಏರಿಕೆಗೆ ಸಿಎಂ ಸಿದ್ದರಾಮಯ್ಯ ಸಮ್ಮತಿ ನೀಡಿದ್ದಾರೆ ಎಂದರು.
ಆಗಸ್ಟ್ 1ರಿಂದ ಪ್ರತಿ ಲೀಟರ್ ಗೆ 3 ರೂ. ದರ ಏರಿಕೆಯಾಗಲಿದೆ. ಎಲ್ಲಾ ಮಾದರಿಯ ಹಾಲಿಗೂ 3 ರೂ ದರ ಏರಿಕೆಯಾಗಲಿದ್ದು, ದರ ಏರಿಕೆ ಹಣ ರೈತರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.