ನಂದಿ ಫಿಲ್ಮಂ ಅವಾರ್ಡ್‍ಗೆ ಡಿಸೆಂಬರ್ 6ಕ್ಕೆ ಪ್ರಶಸ್ತಿ

ಕನ್ನಡದಲ್ಲಿ ಮೊಟ್ಟಮೊದಲ ಬಾರಿಗೆ ನಂದಿ ಪ್ರಶಸ್ತಿ ಆರಂಭವಾಗಿದೆ. ಡಿಸೆಂಬರ್ 6 ರಂದು ಪ್ರಶಸ್ತಿ ಸಮಾರಂಭ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ನಟ ಕಿಚ್ಚ ಸುದೀಪ್ ಚಾಲನೆ ನೀಡಿ ಹೊಸ ಪ್ರಶಸ್ತಿ ಸಮಾರಂಭಕ್ಕೆ ಶುಭ ಹಾರೈಸಿದ್ದಾರೆ.

ಈ ವೇಳೆ ಮಾತನಾಡಿದ  ಕಿಚ್ಚ ಸುದೀಪ್ ಪ್ರಶಸ್ತಿ ಕಾರ್ಯಕ್ರಮಕ್ಕೆ ಹೋಗುವುದು  20 ವರ್ಷ ಆಗಿತ್ತು. ಅದಕ್ಕೆ  ಬೇರೆ ಇತಿಹಾಸವಿದೆ. ಆದರೆ ಇಲ್ಲಿನ ಪ್ರಶಸ್ತಿಗೆ ಮಹತ್ವ ಬೇರೆ. ಪ್ರಶಸ್ತಿ, ದುಡ್ಡು ಅಂತಾ ನೋಡಿದಾಗ ಪ್ರಶಸ್ತಿ ಬಿಟ್ಟು ದುಡ್ಡಿಗೆ ಕೈ ಹಾಕುವವರು ಇದ್ದಾರೆ. ಪ್ರಶಸ್ತಿಗೆ ಗೌರವ ಕೊಟ್ಟು ಅದಕ್ಕಾಗಿ ಬಾಳಿ ಬದುಕುವವರಿಗೆ ಅವರಿಗೆ ನೀಡಿ ಎಂದು ಸಲಹೆನೀಡಿದರು.

ರಾಜ್ಯದಲ್ಲಿ ತಲೆ ಎತ್ತಿ ನೋಡುವ ಪ್ರಶಸ್ತಿ ನಡೆದಿಲ್ಲ. ಅದು ನಂದಿ ಪ್ರಶಸ್ತಿ ಆಗಲಿ, ನೆರೆಯ ಆಂಧ್ರಪ್ರದೇಶ ಸಿನಿಮಾ ಸಾಧಕರಿಗೆ ನಂದಿ ಹೆಸರಲ್ಲಿ ರಾಜ್ಯ ಪ್ರಶಸ್ತಿ ನೀಡುತ್ತಿದೆ. ಆ ಪ್ರಶಸ್ತಿಗೂ ಈ ಪ್ರಶಸ್ತಿಗೂ ಸಮಬಂಧವಿಲ್ಲ.ನಂದಿ ಎನ್ನುವುದು ಕನ್ನಡದ ಪಾಲಿಗೂ ಒಂದು ಪವರ್‍ಫುಲ್ ಇಮೇಜ್  ಎಂದರು

ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಭಾ.ಮಾ.ಹರೀಶ್, ನಿರ್ಮಾಪಕ ನಿತ್ಯಾನಂದ ಪ್ರಭು, ಪದ್ಮಾವತಿ ಚಂದ್ರಶೇಖರ್ ಹಾಗೂ ಅನಿತಾ ರೆಡ್ಡಿ ‘ನಂದಿ ಫಿಲ್ಮಂ ಅವಾರ್ಡ್’ ಸಂಸ್ಥಾಪರಾಗಿದ್ದಾರೆ. ಭಾ.ಮಾ.ಗಿರೀಶ್, ಹರ್ಷಿತಾ, ನಂದಿತಾ ಹಾಗೂ ಅಶೋಕ್ ನಿರ್ದೇಶಕರು.

ನಂದಿ ಪ್ರಶಸ್ತಿ, ಕನ್ನಡ, ತುಳು, ಕೊಡವ, ಕೊಂಕಣಿ, ಬ್ಯಾರಿ ಹಾಗೂ ಬಂಜಾರ ಈ ಭಾಷೆಗಳಿಗೆ ಪ್ರಾಮುಖ್ಯತೆ ಕೊಡಲಾಗುತ್ತದೆ. ಸಾಹಿತ್ಯ, ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳಿಗೂ ಪ್ರಶಸ್ತಿ ನೀಡಲಾಗುತ್ತದೆ. 50ಕ್ಕೂ ಹೆಚ್ಚು ವಿಭಾಗದ ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿ ನೀಡಲು ಉದ್ದೇಶಿಸಲಾಗಿದೆ.