ನಕಲು ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಡಿಬಾರ್

ಕಲಬುರಗಿ,ನ‌.15: ಗುಲಬರ್ಗಾ ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ವಿ.ವಿ. ಕುಲಪತಿ ಪ್ರೊ. ದಯಾನಂದ ಅಗಸರ್ ಅವರು ಕಲಬುರಗಿ ನಗರದ ನ್ಯಾಷನಲ್‌ ಕಲಾ ಮತ್ತು ವಾಣಿಜ್ಯ (ಸಂಜೆ) ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ‌ನೀಡಿದ ಸಂದರ್ಭದಲ್ಲಿ ನಕಲು ಮಾಡುವಲ್ಲಿ ‌ಭಾಗಿಯಾದ ಇಬ್ಬರು ವಿದ್ಯಾರ್ಥಿಗಳನ್ನು ಪರೀಕ್ಷೆಯಿಂದ ಡಿಬಾರ್ ಮಾಡಿದ್ದಾರೆ.

ಇದಲ್ಲದೆ ನ್ಯಾಷನಲ್‌ ವಿಜ್ಞಾನ ಕಾಲೇಜು ಪರೀಕ್ಷಾ ಕೇಂದ್ರಕ್ಕೂ ಕುಲಪತಿಗಳು ಭೇಟಿ ನೀಡಿ ಪರಿಶೀಲಿಸಿದರು. ಉಳಿದಂತೆ ವಿ‌.ವಿ.ಯ ಪರೀಕ್ಷಾ ನಿಯಮಾವಳಿಯಂತೆ ಇಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ ಎಂದು ವಿ.ವಿ. ಕುಲಸಚಿವ (ಮೌಲ್ಯಮಾಪನ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.