ನಕ್ಸಲ್ ದಮನಕ್ಕೆ ಅಮಿತ್ ಶಾ ಪಣ

ಜಗದಾಲ್ಪುರ (ಛತ್ತೀಸ್‌ಗಢ), ಏ. ೫-ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ನಕ್ಸಲರ್‌ರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ೨೨ ಮಂದಿ ಭದ್ರತಾಪಡೆಗಳು ಹುತ್ಮಾತರಾದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಯ್ಪುರದಲ್ಲಿ ಇಂದು ಉನ್ನತ ಮಟ್ಟದ ಸಭೆ ನಡೆಸಿದರು.
ಈ ಸಭೆಯಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೇಲ್, ನಕ್ಸಲ್ ನಿಗ್ರಹ ಪಡೆ ಅಧಿಕಾರಿಗಳು, ಹಿರಿಯ ಪೊಲೀಸ್ ಅಧಿಕಾರಿ, ಭಾಗವಹಿಸಿ ನಕ್ಸಲಿಯರನ್ನು ಗಮನಕ್ಕೆ ಅನುಸರಿಸಬೇಕಾದ ಕಾರ್ಯಾಚರಣೆ ಕುರಿತು ಚರ್ಚೆ ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ.
ಭದ್ರತಾಪಡೆಗಳು ಹುತ್ಮಾತರಾದ ಸುದ್ಧಿ ತಿಳಿದ ತಕ್ಷಣ ಗೃಹ ಸಚಿವ ಅಮಿತ್ ಶಾ ಚುನಾವಣಾ ಪ್ರಚಾರ ಮೊಟಕುಗೊಳಿಸಿ, ದೆಹಲಿಗೆ ದೌಡಾಯಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು. ಇಂದು ಛತ್ತೀಸ್‌ಗಢಕ್ಕೆ ಭೇಟಿನೀಡಿ ಮುಖ್ಯಮಂತ್ರಿಗಳಿಂದ ಮಾಹಿತಿ ಪಡೆದುಕೊಂಡು ಕೆಂಪು ಸೇನಿ ದಮನಕ್ಕೆ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರದಿಂದ ಎಲ್ಲ ರೀತಿಯ ಸಹಕಾರ ಮತ್ತು ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಪೂರೈಸುವುದಾಗಿ ಭರವಸೆ ನೀಡಿದರು ಎಂದು ಮೂಲಗಳು ತಿಳಿಸಿವೆ.
ನಕ್ಸಲ್ ಬಾಧಿತ ಜಿಲ್ಲೆಗಳಲ್ಲಿ ಕೈಗೊಳ್ಳಬೇಕಾದ ಕ್ರಮ ಹಾಗೂ ಅಲ್ಲಿನ ಪರಿಸ್ಥಿತಿ ಕುರಿತು ಅಮಿತ್ ಶಾ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಇದಕ್ಕೂ ಮುನ್ನ ದೆಹಲಿಯಿಂದ ಜಗದಾಲ್ಪುರ ವಿಮಾನ ನಿಲ್ದಾಣಕ್ಕೆ ಬಂದಿಳಿದ ಗೃಹ ಸಚಿವರು, ಪೊಲೀಸ್ ಲೇನ್‌ಗೆ ಭೇಟಿ ಕೊಟ್ಟು ನಕ್ಸಲ್ ದಾಳಿಯಲ್ಲಿ ಹುತ್ಮಾತರಾದ ೧೪ ಮಂದಿ ಭದ್ರತಾ ಸಿಬ್ಬಂದಿಯ ಪಾರ್ಥಿವ ಶರೀರಗಳಿಗೆ ಭಾವಪೂರ್ಣ ಶ್ರದ್ಧಾಂಜಿಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು ಹುತ್ಮಾತ ಭದ್ರತಾ ಸಿಬ್ಬಂದಿಗಳಿಗೆ ನಮನ ಸಲ್ಲಿಸಿದರು.