ನಗರಕ್ಕೆ ಆರೋಗ್ಯ ಸಚಿವ ಡಾ.ಸುಧಾಕರ್

ಕಲಬುರಗಿ,ಏ.30- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಬೆಂಗಳೂರಿನಿಂದ ಬೀದರ್‍ಗೆ ವಿಮಾನದ ಮೂಲಕ ಇಂದು ಆಗಮಿಸಿರುವ ಅವರು, ನಾಳೆ ಕಲಬುರಗಿ ನಗರಕ್ಕೆ ಭೇಟಿ ನೀಡಲಿದ್ದಾರೆ.
ನಾಳೆ ಮೇ.1ರ ಬೆಳಿಗ್ಗೆ 9ರಿಂದ 11ರ ವರೆಗೂ ಕಲಬುರಗಿ ಜಿಲ್ಲಾ ವ್ಯಾಪ್ತಿಯ ಕೋವಿಡ್ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ನಂತರ ಬೆಳಿಗ್ಗೆ 11-30ಕ್ಕೆ ಕೋವಿಡ್ ಕ್ರಮಗಳ ಕುರಿತು ಪ್ರಗತಿ ಪರಿಶಿಲಾ ಸಭೆ ನಡೆಸುವರು. ಮಧ್ಯಾಹ್ನ 2 ಗಂಟೆಗೆ ಪುನಃ ಬೀದರ್‍ಗೆ ತೆರಳಿ ಸಂಜೆ 5ಕ್ಕೆ ಎಚ್‍ಎಎಲ್ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ ಆಗಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಎಂ.ರಾಮೇಗೌಡರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.