(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ:ಏ,29- ಇಂದು ನಗರದಲ್ಲಿ ಮಧ್ಯಾಹ್ನ ಬಿಜೆಪಿ ಬೃಹತ್ ರೋಡ್ ಶೋ ಹಮ್ಮಿಕೊಂಡಿದೆ. ಮಧ್ಯಾಹ್ನ 3.30 ರಿಂದ 4 ವರೆಗೆ ರಾಯಲ್ ಸರ್ಕಲ್ ನಿಂದ ಬೆಂಗಳೂರು ರಸ್ತೆ, ತೇರು ಬೀದಿ ಮಾರ್ಗವಾಗಿ ಮೋತಿ ಸರ್ಕಲ್ ವರೆಗೆ ರೋಡ್ ಶೋ. ನಂತರವ ಅಲ್ಲಿ ಭಾಷಣ ಮಾಡಲಿದ್ದಾರೆ.
ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಮಧ್ಯಪ್ರದೇಶದ ಮುಖ್ಯ ಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ . ಇವರೊಂದಿಗೆ ನಗರ ಅಭ್ಯರ್ಥಿ ಜಿ.ಸೋಮಶೇಖರ ರೆಡ್ಡಿ, ಗ್ರಾಮೀಣ ಅಭ್ಯರ್ಥಿ ಶ್ರೀರಾಮುಲು ಪಾಲ್ಗೊಳ್ಳಲಿದ್ದಾರೆ.
ಕೌಲ್ ಬಜಾರ್ ನ ಮುಖ್ಯ ಬೀದಿಯಲ್ಲಿ ಸಂಜೆ 4 ರಿಂದ ನಡೆಯುವ ರೋಡ್ ಶೋನಲ್ಲಿ ತೆಲಂಗಾಣದ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಪಾಲ್ಗೊಳ್ಳಲಿದ್ದಾರೆ.