ನಗರದಲ್ಲಿ ಇಂದಿರಾ ಕ್ಯಾಂಟೀನ್‍ನಲ್ಲಿ ಹೋಳಿಗೆ ಊಟ

ಮೈಸೂರು: ಮೇ.20:- ಎರಡನೇ ಅವಧಿಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶುಕ್ರವಾರ ?ಸಿದ್ದರಾಮಯ್ಯ ಅಭಿಮಾನಿ ಬಳಗ ಹಾಗೂ ಕೃಷ್ಣರಾಜ ಯುವ ಬಳಗ?ದಿಂದ ಗನ್ ಹೌಸ್‍ನಲ್ಲಿರುವ ಇಂದಿರಾ ಕ್ಯಾಂಟೀನ್‍ನಲ್ಲಿ 100ಕ್ಕೂ ಹೆಚ್ಚಿನ ಜನರಿಗೆ ಹೋಳಿಗೆ ಊಟ ವಿತರಿಸಿ ಸಂಭ್ರಮಾಚರಣೆ ಮಾಡಲಾಯಿತು.
ಈ ವೇಳೆ ಮಾತನಾಡಿದ ಕೆ.ಆರ್. ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದು ಸಂತಸ ತಂದಿದೆ. ಇಬ್ಬರೂ ಅನುಭವಿ ಹಾಗೂ ದಕ್ಷ ಆಡಳಿತಗಾರರು. ಇವರ ನೇತೃತ್ವದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಲಿದೆ ಎಂದರು.
ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಲಭಿಸುವಲ್ಲಿ ಪ್ರಮುಖ ಪಾತ್ರ ವಹಿಸಿ ಹೆಚ್ಚಿನ ಸ್ಥಾನ ಗಳಿಸಿದ್ದಾರೆ. ಅದನ್ನು ಮನಗಂಡು ಕಾಂಗ್ರೆಸ್ ಪಕ್ಷದ ವರಿಷ್ಠರು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿದ್ದು, ರಾಜ್ಯದ ಎಲ್ಲಾ ವರ್ಗದ ಜನಾಂಗದವರ ಏಳಿಗೆಗಾಗಿ ಹಗಲಿರುಳು ಶ್ರಮವಹಿಸುತ್ತಾರೆ. ಅವರು ನೀಡಿದ ಗ್ಯಾರಂಟಿಗಳನ್ನು ಈಡೇರಿಸಲಿದ್ದಾರೆ ಎಂದು ಹೇಳಿದರು.
ಮುಖಂಡರಾದ ಎಸ್.ಎನ್.ರಾಜೇಶ್, ಮಂಜುನಾಥ್, ವಿಜಯ್ ಕುಮಾರ್, ಶಿವು, ರವಿಚಂದ್ರ, ಶಕ್ತಿಪ್ರಸಾದ್, ತೀರ್ಥ ಕುಮಾರ್ ಇದ್ದರು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶುಕ್ರವಾರ ಸಿದ್ದರಾಮಯ್ಯ ಅಭಿಮಾನಿ ಬಳಗ ಹಾಗೂ ಕೃಷ್ಣರಾಜ ಯುವ ಬಳಗದಿಂದ ಗನ್ ಹೌಸ್‍ನಲ್ಲಿರುವ ಇಂದಿರಾ ಕ್ಯಾಂಟೀನ್‍ನಲ್ಲಿ ಹೋಳಿಗೆ ಊಟ ವಿತರಿಸಲಾಯಿತು.