
ಬೆಂಗಳೂರು, ಮೇ.೪- ಜಿದ್ದಾಜಿದ್ದಿನ ಅಖಾಡವಾಗಿರುವ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೆಲದಿನಗಳಷ್ಟೇ ಬಾಕಿ ಉಳಿದಿದ್ದು ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು, ಶನಿವಾರ ಮತ್ತು ಭಾನುವಾರ ಎರಡು ದಿನ ರೋಡ್ ಶೊ ನಡೆಸಿ ಮತಯಾಚಿಸಲಿದ್ದಾರೆ.
ಈಗಾಗಲೇ ರಾಜ್ಯದ ಹಲವೆಡೆ ಬೃಹತ್ ಸಮಾವೇಶ ಹಾಗೂ ರೋಡ್ ಶೊ ನಡೆಸಿ ಮೋದಿಯವರು ರಾಜ್ಯದಲ್ಲಿ ಸಂಚಲನ ನಡೆಸಿದ್ದಾರೆ. ಈಗ ಬೆಂಗಳೂರಿನ ಮೇಲೆ ಕಣ್ಣಿಟ್ಟು ಮತಬೇಟೆ ನಡೆಸಲಿದ್ದಾರೆ ಈ ಮೊದಲು ಶನಿವಾರ ಬೆಳಿಗ್ಗೆ ಮತ್ತು ಸಂಜೆ ರೋಡ್ ಶೊ ನಡೆಸಲು ಮೋದಿ
ನಿರ್ಧರಿಸಿದ್ದರು. ಕೆಲ ದಿನಗಳಿಂದ ನಗರದಲ್ಲಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ಬೆಳಿಗ್ಗೆ ರೊಡ್ ಶೋ ನಡೆಸಲು ಮುಂದಾಗಿದ್ದಾರೆ.
ಮೇ ೬ರಂದು ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ಹಾಗೂ ಮೇ ೭ರಂದು ಬೆಳಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ರೋಡ್ ಶೊ ನಡೆಸಲಿದ್ದಾರೆ.