ನಗರದಲ್ಲಿ ನಾಳೆ ಅನ್ ಲಾಕ್‍ಡೌನ್: ಅಗತ್ಯ ವಸ್ತು ಖರೀದಿಗೆ ಬಿಡುವು

ಮೈಸೂರು: ಜೂ.02: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೋವಿಡ್-19 ಹರಡುವಿಕೆಯ 2ನೇ ಅಲೆಯ ಹಿನ್ನಲೆಯಲ್ಲಿ ಜೂ.7 ರವರೆಗೆ ಕೋವಿಡ್-19 ನಿರ್ಭಂಧಗಳ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಹೊರಡಿಸಲಾಗಿದ್ದು, ಸೋಮವಾರ ಮತ್ತು ಗುರುವಾರ ಮಾತ್ರ ಅವಶ್ಯಕ ವಸ್ತುಗಳ ಖರೀದಿಗೆ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ವಿನಾಯಿತಿ ನೀಡಿದ್ದಾರೆ.
ನಾಳೆ ನಗರದ ಸಾರ್ವಜನಿಕರಿಗೆ ಅಗತ್ಯ ವಸ್ತು ಖರೀದಿಗೆ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಅನುವು ಮಾಡಿಕೊಟ್ಟಿದ್ದು ನಗರವು ಅನ್ ಲಾಕ್‍ಡೌನ್ ಆಗಲಿದೆ.
ಅವಶ್ಯಕ ವಸ್ತುಗಳಾದ ದಿನಸಿ, ಹಣ್ಣು, ತರಕಾರಿ ಅಂಗಡಿಗಳನ್ನು ಮಾತ್ರ ತೆರೆಯಲು ಅನುಮತಿ ನೀಡಿದ್ದು, ಇತರೇ ಅಂಗಡಿಗಳನ್ನು ತೆರೆಯಲು ಯಾವುದೇ ಅನುಮತಿ ಇರುವುದಿಲ್ಲ ಎಂದು ಪೆÇಲೀಸ್ ಆಯುಕ್ತ ಡಾ.ಚಂದ್ರಗುಪ್ತ ಸೂಚನೆ ನೀಡಿದ್ದಾರೆ.
ಅವಶ್ಯಕ ವಸ್ತುಗಳ ಅಂಗಡಿಗಳನ್ನು ಹೊರತುಪಡಿಸಿ ಇತರೇ ಅಂಗಡಿಗಳನ್ನು ತೆರೆದು ವ್ಯಾಪಾರ ಮಾಡುತ್ತಿರುವುದು ಕಂಡು ಬಂದಲ್ಲಿ, ಅಂತಹವರ ವಿರುದ್ದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಹಾಗೂ ಈ ಅಂಗಡಿಗಳನ್ನು ಮುಚ್ಚಿಸಿ, ಅಂಗಡಿಯ ಪರವಾನಗಿಯನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಅನವಶ್ಯಕವಾಗಿ ಹೊರಗಡೆ ಓಡಾಡದೇ, ಕೇವಲ ಅವಶ್ಯಕ ವಸ್ತುಗಳಾದ ದಿನಸಿ, ಹಣ್ಣು, ತರಕಾರಿಗಳ ಖರೀದಿ ಸಂಬಂಧ ಮಾತ್ರ ಸಾರ್ವಜನಿಕರು ಹೊರಗಡೆ ಬರಬೇಕು.
ಸಾರ್ವಜನಿಕರು ದಿನಸಿ, ಹಣ್ಣು, ತರಕಾರಿಗಳ ಖರೀದಿಗೆ ದೂರದ ಅಂಗಡಿಗಳಿಗೆ ಹೋಗದೇ, ತಮ್ಮ ಮನೆಯ ಸಮೀಪ ಇರುವ ಅಂಗಡಿಗಳಿಗೆ ಮಾತ್ರ ತೆರಳಿ ಖರೀದಿ ಮಾಡಬೇಕು.
ನಗರ ಪೆÇಲೀಸರು ಎಲ್ಲಾ ಸ್ಥಳಗಳಲ್ಲಿ ಸಾರ್ವಜನಿಕರ ವಾಹನಗಳನ್ನು ಪರಿಶೀಲಿಸಲಿದ್ದು, ಅನಗತ್ಯವಾಗಿ ಓಡಾಡುವುದು ಕಂಡು ಬಂದಲ್ಲಿ ಅಂತಹವರ ವಾಹನಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಕೊಳ್ಳುವರು.