ನಗರದಲ್ಲಿ ಪುನೀತ್ ರಾಜ್‍ಕುಮಾರ್ ಹುಟ್ಟುಹಬ್ಬ ಆಚರಣೆ

ಹುಬ್ಬಳ್ಳಿ,ಮಾ17 : ಕರ್ನಾಟಕ ರತ್ನ ಡಾ. ಪುನೀತ್ ರಾಜ್‍ಕುಮಾರ್ ಅವರ ಹುಟ್ಟು ಹಬ್ಬವನ್ನು ಹುಬ್ಬಳ್ಳಿಯಲ್ಲಿ ಆಟೋ ಚಾಲಕರ ಸಂಘದ ವತಿಯಿಂದ ಬೃಹತ್ ಕೇಕ್ ಕತ್ತರಿಸಿ ಆಚರಣೆ ಮಾಡಲಾಯಿತು.
ಆಟೋದಲ್ಲಿ ಪುನೀತ್ ರಾಜ್‍ಕುಮಾರ್ ಅವರ ಭಾವಚಿತ್ರದ ಕಟೌಟ್ ಹಾಕಿ, ಚನ್ನಮ್ಮ ಸರ್ಕಲ್ ನಿಂದ ಪಾಲಿಕೆ ವರೆಗೆ ಮೆರವಣಿಗೆ ಮಾಡಲಾಯಿತು.
ಹುಬ್ಬಳ್ಳಿಯಲ್ಲಿ ಪುನೀತ್ ಅವರ ಪುತ್ಥಳಿಯನ್ನ ನಿರ್ಮಿಸಬೇಕೆಂದು ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತರಿಗೆ ಮನವಿ ಮಾಡಲಾಯಿತು.