ನಗರದಲ್ಲಿ ಯದುವೀರ ಒಡೆಯರ್ ಹುಟ್ಟುಹಬ್ಬದಾಚರಣೆ

ಮೈಸೂರು,ಮಾ.24:- ಮೈಸೂರಿನ ರಾಜ ವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಹುಟ್ಟುಹಬ್ಬವನ್ನು ವಾರ್ಡ್ ನಂ 23 ರ ನಗರ ಪಾಲಿಕೆ ಸದಸ್ಯರಾದ ಪ್ರಮೀಳಾ ಭರತ್ ಅವರ ನೇತೃತ್ವದಲ್ಲಿ ವಾರ್ಡಿನ ಅಮೃತೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಆಚರಿಸಲಾಯಿತು.
ಇದೇ ವೇಳೆ ರಾಜವಂಶಸ್ಥ ಯದುವೀರ್ ಒಡೆಯರ್ ಅವರಿಗೆ ಆರೋಗ್ಯಾದಿ ಭಾಗ್ಯಗಳನ್ನು ಕರುಣಿಸುವಂತೆ ಪ್ರಾರ್ಥಿಸಿ ಶುಭ ಕೋರಲಾಯಿತು.
ಈ ಸಂದರ್ಭದಲ್ಲಿ ನಗರ ಬಿಜೆಪಿ ಉಪಾಧ್ಯಕ್ಷರಾದ ಹರ್ಷ, ಚಾಮರಾಜ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷರಾದ ಸಚಿನ್. ಆರ್, ಚಾಮರಾಜ ಕ್ಷೇತ್ರದ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಲಕ್ಷ್ಮಿ, ವಾರ್ಡಿನ ಮುಖಂಡರಾದ ಭರತ್, ವಿಘ್ನೇಶ್ವರ ಭಟ್, ಶ್ರೀನಿವಾಸ್, ಸುದರ್ಶನ್, ಕಾಂತಿಲಾಲ್ ಜೈನ್, ಮಂಜುನಾಥ್, ವಿಷ್ಣು, ಶಿವು, ಚಾಮರಾಜ ಕ್ಷೇತ್ರದ ಯುವ ಮೋರ್ಚಾ ಉಪಾಧ್ಯಕ್ಷರಾದ ಯೋಗೇಶ್, ಸುಕನ್ಯಾ, ಕೃಷ್ಣ ಮತ್ತು ವಾರ್ಡಿನ ಕಾರ್ಯಕರ್ತರು ಉಪಸ್ಥಿತರಿದ್ದರು.