ಸಂಜೆವಾಣಿ ವಾರ್ತೆ
ದಾವಣಗೆರೆ.ಸೆ.೨೩; ಜಿಲ್ಲಾ ಉಸ್ತುವಾರಿ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಅವರ ಜನ್ಮದಿನದ ಅಂಗವಾಗಿ ಮಹಾನಗರ ಪಾಲಿಕೆಯ ಐದನೇ ವಾರ್ಡಿನ ಸದಸ್ಯರಾದ ಶ್ರೀಮತಿ ಸುಧಾ ಇಟ್ಟಿಗುಡಿ ಮಂಜುನಾಥ್ ಹಾಗೂ ಕಾಂಗ್ರೆಸ್ ಮುಖಂಡರಾದ ಮಂಜುನಾಥ್ ಇಟ್ಟಿಗುಡಿ ನೇತೃತ್ವದಲ್ಲಿ ನಗರದೇವತೆ ದುರ್ಗಾಂಭಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ ಹಾಗೂ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರುಗಳು ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.ಈ ಸಮಯದಲ್ಲಿ ದೇವಸ್ಥಾನದ ಧರ್ಮದರ್ಶಿಗಳು ಮಾಜಿ ಮೇಯರ್ ಹೆಚ್.ಬಿ ಗೋಣೆಪ್ಪ. ಗೌಡ್ರು ಚನ್ನಬಸಪ್ಪ. ಆರ್ ವಾಸುದೇವ್. ಎಂ ಜಿ ಪುಟ್ಟಸ್ವಾಮಿ. ಜಿ ಆರ್ ಷಣ್ಮುಖಪ್ಪ. ಬಿ. ಲಿಂಗರಾಜ್ ಕಾಂಗ್ರೆಸ್ ಮುಖಂಡರಾದ ಮಂಜುನಾಥ್, ಕವಿರಾಜ. ಗಿರಿಜಮ್ಮ ಮತ್ತಿತರರಿದ್ದರು.