ನಗರದ ಹಲವು ಅಂಗಡಿಗಳಲ್ಲಿ ಕಳ್ಳರ ಕೈಚಳಕಬ್ಯಾಂಕ್ ಕಳ್ಳತನಕ್ಕೆ ಯತ್ನ


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ: ನಗರದ ಕಪ್ಪಗಲ್ಲು ರಸ್ತೆ ಸೇರಿದಂತೆ ಹಲವಡೆ ವಾಣಿಜ್ಯ  ಮಳಿಗೆಗಳಲ್ಲಿ, ನಿನ್ನೆ ರಾತ್ರಿ    ಸರಣಿಗಳ್ಳತ ನಡೆಸಿ ಸಾವಿರಾರು ರೂ ನಗದನ್ನು ದೋಚಿಕೊಂಡು ಹೋಗಿರುವುದು ಹಾಗು ಗ್ರಾಮೀಣ ಬ್ಯಾಂಕ್ ಬುಡಾ ಶಾಖೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿರುವ  ಘಟನೆ ನಡೆದಿದೆ.
ಈ ರಸ್ತೆಯಲ್ಲಿ ಮೆಡ್ ಪ್ಲಸ್ ನಲ್ಲಿ  24880 ರೂ, ಸಾಯಿ ಇಂದಿರಾ ಮೆಡಿಕಲ್ ಸ್ಟೋರ್ ನಲ್ಲಿ 8000 ರೂ, ಕನಕ ದುರ್ಗಮ್ಮ ಪ್ರಾವಿಷನ್ ಸ್ಟೋರ್ ನಲ್ಲಿ ಒಂದು ಸಾವಿರ ರೂ ಮತ್ತು ವಿಜಯ ರಾಮ ಸೂಪರ್ ಮಾರ್ಕೇಟ್ ನಲ್ಲಿ 80 ಸಾವಿರ ರೂ ನಗದು ದೋಚಿದ್ದಾರೆ.
ಈ ಬಗ್ಗೆ ಗಾಂಧಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 ಕಳ್ಳರು ಮುಖಕ್ಕೆ ವಾಸ್ಕ್ ಧರಿಸಿಕೊಂಡು, ಬ್ಯಾಟರಿ ಹಿಡಿದುಕೊಂಡು, ಮಳಿಗೆಯ ಷಟರ್ ನಿಂದ ಒಳಗೆ ನುಗ್ಗಿ, ಕ್ಯಾಸ್ ಕೌಂಟರ್ ತೆಗೆದು ಹಣ ಲಪಟಾಯಿಸಿದ್ದಾರೆ.
ಮಳಿಗೆಗಳ ಷಟರ್ ಗಳನ್ನು ಹಾರೆಗಳಿಂದ ಮೀಟಿ ತೆಗೆಯಲಾಗಿದೆ ಇದೆಲ್ಲ ಸಿಸಿ ಕೆಮೆರಾಗಳಲ್ಲಿ ರೆಕಾರ್ಡ್ ಆಗಿದೆ.
ಇನ್ನು ನಗರದ ಬುಡಾ ಕಚೇರಿ ಆವರಣದಲ್ಲಿನ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕಿನ ಶಾಖೆಯ ಷಟರ್ ಮುರಿದು ಕಳ್ಳತನಕ್ಕೆ ಪ್ರಯತ್ನ‌ ನಡೆದಿದೆಯಂತೆ. ಇದೇ ರೀತಿ ಕೌಲ್ ಬಜಾರ್ ನ ಹಲವಡೆಗಳಲ್ಲೂ ಸರಣಿ ಕಳ್ಳತನ ನಡೆದಿದೆ ಎಂದು ಹೇಳಲಾಗುತ್ತಿದೆ. 
ಸ್ಥಳಕ್ಕೆ ಪೊಲೀಸರು ಬಂದು ಹೋಗಿದ್ದಾರೆ‌. ಕಳ್ಳರನ್ನು ಪತ್ತೆ ಹಚ್ಚಬೇಕಿದೆ.