ನಗರಸಭೆ ಸಾರ್ವತ್ರಿಕ ಚುನಾವಣೆ: ಜಿಲ್ಲಾಧಿಕಾರಿಗಳಿಂದ ಮತದಾನ

ಬೀದರ: ಎ.28:ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ-2021ರ ಮತದಾನ ದಿನವಾದ ಏಪ್ರಿಲ್ 27ರಂದು ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್ ಅವರು ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿರುವ ಮತಗಟ್ಟೆ ಸಂಖ್ಯೆ 35ಕ್ಕೆ ಆಗಮಿಸಿ ತಮ್ಮ ಮತ ಹಕ್ಕನ್ನು ಚಲಾಯಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಪ್ರಿಲ್ 27ರಂದು ಬೀದರ ನಗರಸಭೆಯ ವ್ಯಾಪ್ತಿಯ 32 ವಾರ್ಡುಗಳಿಗೆ ಸಾರ್ವತ್ರಿಕ ಚುನಾವಣೆ ಮತ್ತು ಮತ್ತು ಹಳ್ಳಿಖೇಡ (ಬಿ) ಪುರಸಭೆಯ 11ನೇ ವಾರ್ಡಿಗೆ ಉಪ ಚುನಾವಣೆಯ ಮತದಾನ ನಡೆಯುತ್ತಿದೆ ಎಂದು ತಿಳಿಸಿದರು.
ತಾವು ಕೂಡ ಏಪ್ರೀಲ್ 27ರಂದು ಮತದಾನ ಮಾಡಿದ್ದಾಗಿ ತಿಳಿಸಿದ ಜಿಲ್ಲಾಧಿಕಾರಿಗಳು, ಈ ಚನಾವಣೆಯಲ್ಲಿ 72,609 ಪುರುಷರು, 75,703 ಮಹಿಳೆಯರು ಮತ್ತು 13 ಮಂಗಳಮುಖಿಯರು ಸೇರಿ ಒಟ್ಟು 1,53,325 ಮತದಾರರು ಮತದಾನ ಹಕ್ಕನ್ನು ಚಲಾಯಿಸಲಿದ್ದಾರೆ ಎಂದರು.
ಕೋವಿಡ್ ಎರಡನೇ ಅಲೆಯು ತೀವ್ರ ಹೆಚ್ಚುತ್ತಿರುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಂಡು ಮತದಾನದಲ್ಲಿ ಪಾಲ್ಗೊಳ್ಳುವುದಕ್ಕೆ ಮತದಾರರಿಗೆ ಒಂದು ಗಂಟೆ ಹೆಚ್ಚುವರಿ ಅವಧಿಯನ್ನು ವಿಸ್ತರಿಸಿ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಮತದಾನಕ್ಕೆ ಬರುವ ಬರುವ ಪ್ರತಿಯೊಬ್ಬರು ಮತಗಟ್ಟೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು, ಕಡ್ಡಾಯ ಮಾಸ್ಕ್ ಧರಿಸಿ ಮತದಾನ ಮಾಡಬೇಕು ಎಂದು ತಿಳಿಸಿ, ಮತಗಟ್ಟೆಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಲು ಸೂಚಿಸಲಾಗಿದೆ ಎಂದರು.