
(ಸಂಜೆವಾಣಿ ಪ್ರತಿನಿಧಿಯಿಂದ)
ಬೆಂಗಳೂರು,ಜು.೧೯:ಸಿಲಿಕಾನ್ ಸಿಟಿ ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಳವಳ ವ್ಯಕ್ತಪಡಿಸಿದ್ದಾರೆ.ಐವರು ಶಂಕಿತ ಉಗ್ರರನ್ನು ಬಲೆಗೆ ಕೆಡವಿದ ಬೆನ್ನಲ್ಲೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ೨ ತಿಂಗಳಿನಿಂದ ಅಪರಾಧ ಸಂಖ್ಯೆ ಹೆಚ್ಚಳವಾಗುತ್ತಿದೆ. ಕಾನೂನು ಸುವ್ಯವಸ್ಥೆ ಅಪಾರಾಧ ನಿಯಂತ್ರಣ ಕೈತಪ್ಪಿದೆ. ಪ್ರತಿನಿತ್ಯ ಕೊಲೆ, ಸುಲಿಗೆ ನಡೆಯುತ್ತಿದೆ ಎಂದು ಟೀಕಿಸಿದರು.ಬೆಂಗಳೂರಿನಲ್ಲೇ ನೆಲೆಸಿ ಅಪರಾಧ ಚಟುವಟಿಕೆಗಳಿಗೆ ಕುಮ್ಮಕ್ಕು ಕೊಡುವಂತಹ ಕೆಲಸಗಳು ನಡೆಯುತ್ತಿವೆ. ಬಂಧಿತ ಐಎಸ್‌ಐ ಕೂಡ ಸಂಪರ್ಕದಲ್ಲಿದ್ದಾರೆ. ಈ ಅಂಶವನ್ನು ಸಿಸಿಬಿ ಅಧಿಕಾರಿಗಳು ಬಹಿರಂಗಪಡಿಸಿ ಇದರ ಆಳವನ್ನು ಬೇಧಿಸಬೇಕು, ಐವರು ಶಂಕಿತ ಉಗ್ರರ ಬಂಧನ ಮಾಡಿರುವುದಕ್ಕೆ ಸಿಸಿಬಿ ಪೊಲೀಸರಿಗೆ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದರು.ಬಹುತೇಕ ಪ್ರಕರಣಗಳಲ್ಲಿ ಪೊಲೀಸ್ ಠಾಣೆಗಳಲ್ಲಿ ದೂರುಗಳೇ ದಾಖಲಾಗುತ್ತಿಲ್ಲ. ಕಾನೂನು ಸುವ್ಯವಸ್ಥೆ ಅಪರಾಧ ನಿಯಂತ್ರಣ ಮಾಡುವುದು ಪೊಲೀಸರ ಕೆಲಸವಾಗಿದೆ. ಈ ಸರ್ಕಾರ ಬಂದ ಮೇಲೆ ಮಧ್ಯವರ್ತಿಗಳು ಮಧ್ಯ ಪ್ರವೇಶಿಸಿ ನಿಯಂತ್ರಣ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ ಇದಕ್ಕೆ ಸರ್ಕಾರ ಅವಕಾಶ ಕೊಡಬಾರದು, ಬೆಂಗಳೂರಿನಲ್ಲಿ ಕ್ಲಬ್ ಚಟುವಟಿಕೆಗಳು ಹೆಚ್ಚಾಗಿವೆ. ಹಫ್ತಾ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.ಎನ್‌ಐಎ ತನಿಖೆಗೆ ಆಗ್ರಹಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನವಾಗಿರುವ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ಒಪ್ಪಿಸಬೇಕು ಎಂದು ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಒತ್ತಾಯಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.ಮಂಗಳೂರಿನಲ್ಲಿ ಕುಕ್ಕರ್‌ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಕೂಲಂಕುಷವಾಗಿ ತನಿಖೆ ನಡೆಸಬೇಕಾಗಿತ್ತು. ಸುರಕ್ಷಿತವಾಗಿದ್ದೇವೆ ಎಂಬ ಭಾವನೆ ಜನರಿಗೆ ಬರಬೇಕು ಎಂದು ಅವರು ಹೇಳಿದರು.