ನಗರ ಕಾಂಗ್ರೆಸ್ ಟಿಕೆಟ್ ಕೋರಿ ಬಷೀರುದ್ದೀನ್ ಅರ್ಜಿ ಸಲ್ಲಿಕೆ

ರಾಯಚೂರು.ನ.೦೭- ನಗರ ವಿಧಾನಸಭಾ ಕ್ಷೇತ್ರ ಸ್ಪರ್ಧಾಕಾಂಕ್ಷಿಗಳ ಕಾಂಗ್ರೆಸ್ ಪಕ್ಷದ ಟಿಕೆಟ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಂದುವರೆದಿದ್ದು, ಬಷೀರುದ್ದೀನ್ ಅವರು ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಕೆಪಿಸಿಸಿ ಕಛೇರಿಯಲ್ಲಿ ಅವರು ೫ ಸಾವಿರ ಶುಲ್ಕದೊಂದಿಗೆ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇಲ್ಲಿವರೆಗೆ ಒಟ್ಟು ಮೂವರು ಅರ್ಜಿ ಸಲ್ಲಿಸಿದಂತಾಗಿದೆ. ನವೆಂಬರ್ ೧೫ ರವರೆಗೂ ಅರ್ಜಿ ಸಲ್ಲಿಕೆ ಪ್ರಕ್ರಿಯೆಗಳು ಮುಂದುವರೆಯಲಿವೆ. ರಾಯಚೂರು ನಗರದ ಕಾಂಗ್ರೆಸ್ ಟಿಕೆಟ್‌ಗೆ ಹೆಚ್ಚಿನ ಬೇಡಿಕೆ ಬರುವಂತಾಗಿದೆ.