ನಗರ ಕೇಂದ್ರ ಗ್ರಂಥಾಲಯ ಆವರಣದ ಉದ್ಯಾನವನದಲ್ಲಿ ಸ್ವಚ್ಛತಾ ಕಾರ್ಯ

ಚಿತ್ರದುರ್ಗ.ಜೂ.೧೪; ಚಿತ್ರದುರ್ಗ ನಗರ ಕೇಂದ್ರ ಗ್ರಂಥಾಲಯ ಎಲ್ಲಾ ಸಿಬ್ಬಂದಿ ವರ್ಗ ಮತ್ತು ಇಂಡಿಯನ್ ನ್ಯಾಷನಲ್ ಬ್ಯಾಂಕ್ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಮಂಗಳವಾರ ಚಿತ್ರದುರ್ಗ ನಗರ ಕೇಂದ್ರ ಗ್ರಂಥಾಲಯದ ಮುಂದಿರುವ ಉದ್ಯಾನವನ್ನು ಶ್ರಮದಾನ ಮಾಡುವ ಮೂಲಕ ಸ್ವಚ್ಛಗೊಳಿಸಲಾಯಿತು. ನಂತರ ನೆರಳು ಕೊಡುವ ಸಸಿಗಳನ್ನು ಹಾಕಲಾಯಿತು.
ಈ  ಸಂದರ್ಭದಲ್ಲಿ ನಗರ ಕೇಂದ್ರ ಗ್ರಂಥಾಲಯ ಮುಖ್ಯ ಗ್ರಂಥಾಲಯಾಧಿಕಾರಿ ಕೊಳ್ಳಿ ಬಸವರಾಜ್ ಸೇರಿದಂತೆ ಗ್ರಂಥಾಲಯ ಇಲಾಖೆ ಸಿಬ್ಬಂದಿ ವರ್ಗ, ಇಂಡಿಯನ್ ನ್ಯಾಷನಲ್ ಬ್ಯಾಂಕ್ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.