ನಗರ ಪ್ರದಕ್ಷಿಣೆ, ಪರಿಸ್ಥಿತಿ ಅವಲೋಕಸಿದ ಜಿಲ್ಲಾಧಿಕಾರಿ


ಗದಗ,ಏ.26 : ಕೋರೊನಾ ನಿಯಂತ್ರಿಸಲು ಗದಗ ಜಿಲ್ಲಾದ್ಯಂತ ಕಠಿಣ ಕಪ್ರ್ಯೂ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಗದಗ-ಬೆಟಗೇರಿ ಅವಳಿ ನಗರದಲ್ಲಿ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಅವರು ನಗರ ಪ್ರದಕ್ಷಿಣೆ ನಡೆಸಿ ಪರಿಸ್ಥಿತಿ ಅವಲೋಕನ ಮಾಡಿದರು.
ಅವಳಿ ನಗರದ ಪ್ರಮುಖ ವೃತ್ಯಗಳಾದ ಮುಳಗುಂದ ನಾಕಾ, ಬಸವೇಶ್ವರ ವೃತ್ತ, ಕಿತ್ತೂರು ರಾಣಿ ಚನ್ನಮ್ಮ ಸರ್ಕಲ್, ಪ್ರಮುಖ ಮಾರುಕಟ್ಟೆ, ಗಾಂಧಿ ಸರ್ಕಲ್ ಸೇರಿದಂತೆ, ರಂಗನವಾಡಿ, ಟಾಂಗಾ ಕೂಟ, ಬೆಟಗೇರಿ ತರಕಾರಿ ಮಾರುಕಟ್ಟೆ, ವಿವಿಧ ಬೀದಿಗಳಲ್ಲಿ ಸಂಚರಿಸಿದರು.
ಕರೊನಾ ಸೋಂಕು ನಿಯಂತ್ರಣಕ್ಕೆ ಜಾರಿ ಮಾಡಲಾದ ವಾರಾಂತ್ಯ ಕಪ್ರ್ಯೂ ಸರಿಯಾಗಿ ಅನುಷ್ಠಾನ ಮಾಡಬೇಕು. ಸೋಂಕು ನಿಯಂತ್ರಣ ಮಾರ್ಗಸೂಚಿಗಳನ್ನು ಉಲ್ಲಂಘಿಸಿದವರ ಮೇಲೆ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ನಗರ ಪ್ರದಕ್ಷಿಣೆ ವೇಳೆ ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಗದಗ ಬೆಟಗೇರಿ ನಗರಸಭೆ ಪೌರಾಯುಕ್ತ ರಮೇಶ್ ಜಾಧವ, ನಗರ ಪೆÇಲೀಸ ಠಾಣೆ ಸಿಪಿಐ ಪಿ.ವಿ ಸಾಲಿಮಠ ಜೊತೆಗಿದ್ದರು.