ನಗರ ವಿಧಾನಸಭಾ ಕ್ಷೇತ್ರ : ಟಿಕೆಟ್‌ಗೆ ಮನವಿ

ರಾಯಚೂರು.ನ.೨೨- ನಗರ ವಿಧಾನಸಭಾ ಕ್ಷೇತ್ರಕ್ಕೆ ಸ್ಪರ್ಧಿಸಲು ಟಿಕೆಟ್ ನೀಡುವಂತೆ ನಗರಸಭೆ ಮಾಜಿ ಸದಸ್ಯ ವಿ.ಲಕ್ಷ್ಮೀರೆಡ್ಡಿ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ ಅವರಿಗೆ ಕೋರಿದ್ದಾರೆ.
೧೯೮೬ ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಸುಧೀರ್ಘವಾಗಿ ಸೇವೆ ಸಲ್ಲಿಸಲಾಗಿದೆ. ನಗರಸಭೆ ಸದಸ್ಯರಾಗಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ, ಸೇವಾದಳ ಜಂಟಿ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಪಕ್ಷದಿಂದ ಸ್ಪರ್ಧಿಸಲು ಅವಕಾಶ ನೀಡಬೇಕು. ಪಕ್ಷದ ನಿಯಮದಂತೆ ೨ ಲಕ್ಷ ಠೇವಣಿ ಹಣ ನೀಡಲು ನನ್ನಿಂದ ಸಾಧ್ಯವಾಗುತ್ತಿಲ್ಲ. ನಗರ ವಿಧಾನಸಭಾ ಕ್ಷೇತ್ರದಲ್ಲಿ ಇಲ್ಲಿವರೆಗೂ ನಾನು ಮಾಡಿದ ಸೇವೆಯನ್ನು ಪರಿಗಣಿಸಿ, ಟಿಕೆಟ್ ನೀಡುವಂತೆ ಕೋರಿದ್ದಾರೆ.