ನಗುವಿನ ಹೂಗಳ ಮೇಲೆಗೆ ಲಂಡನ್ ಸಂಗೀತ

ಬೆಂಗಳೂರು: ಇತ್ತೀಚಿಗೆ ಸ್ಯಾಂಡಲ್‌ವುಡ್‌ನಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ ಸಿನಿಮಾಗಳು ಬರುತ್ತಿದ್ದು, ಒಂದಿಲ್ಲೊಂದು ಕಾರಣಗಳಿಂದ ಸದ್ದುಮಾಡುತ್ತಿವೆ. ಇದೀಗ ನಿರ್ದೇಶಕ ವೆಂಕಟ್ ಭಾರದ್ವಾಜ್ ಆಕ್ಷನ್ ಕಟ್ ಹೇಳಿರುವ ‘ನಗುವಿನ ಹೂಗಳ ಮೇಲೆ’ ಚಿತ್ರಕ್ಕೆ ಲಂಡನ್‌ನಲ್ಲಿ ಹಿನ್ನೆಲೆ ಸಂಗೀತ ಮುದ್ರಣ ಮಾಡಲಾಗಿದೆ.

ಚಿತ್ರದ ಸಂಗೀತ ನಿರ್ದೇಶಕ ಲವ್ ಪ್ರಾನ್ ಮೆಹತಾ ಲಂಡನ್ ನ ಮೆಲ್ಲಿಪ್ಲೋಸ್ ಸ್ಟುಡಿಯೋದಲ್ಲಿ ಚಿತ್ರದ ಹಿನ್ನೆಲೆ ಸಂಗೀತ, ಎಫೆಕ್ಟ್ಸ್, 7.1 ಸೌಂಡ್ ಮಾಡಲಾಗಿದೆ ಎಂದು ನಿರ್ದೇಶಕ ವೆಂಕಟ್ ಭಾರದ್ವಾಜ್ ಹರುಷಗೊಂಡಿದ್ದು, ಸಂತಸ ಹಂಚಿಕೊಂಡಿದ್ದಾರೆ.

ಈ ಹಿಂದೆ ಆಮ್ಲೆಟ್, ಕೆಂಪಿರ್ವೆ ಚಿತ್ರಗಳಿಗೆ ನಿರ್ದೇಶನ ಮಾಡಿದ್ದ ವೆಂಕಟ್ ಭಾರದ್ವಾಜ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಜೊತೆಗೆ ನಿರ್ದೇಶನದ ಮಾಡಿದ್ದಾರೆ.ರೋಮ್ಯಾಂಟಿಕ್  ಜೊತೆಗೆ ಆಕ್ಷನ್ ಕಥಾಹಂದರ ಒಳಗೊಂಡ ಈ ಚಿತ್ರವನ್ನು ಕುಂದಾಪುರ, ತೀರ್ಥಹಳ್ಳಿ, ಶಿವಮೊಗ್ಗ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಪೋಸ್ಟ್ ಪ್ರೊಡಕ್ಷನ್ಸ್ ಕೆಲಸ ಸಂಪೂರ್ಣ ಮುಗಿಸಿದ್ದು ಬಿಡುಗಡೆಗೆ ಸಿದ್ದವಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಚಿತ್ರದಲ್ಲಿ ನಾಯಕನಾಗಿ ಅಭಿಷೇಕ್ ರಾಮದಾಸ್, ನಾಯಕಿಯಾಗಿ ಶರಣ್ಯಾ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಇನ್ನುಳಿದಂತೆ ತಾರಾಗಣದಲ್ಲಿ ಬಾಲ ರಾಜವಾಡಿ, ಗಿರೀಶ್, ಆಶಾ ಸುಜಯ್, ನಂಜಪ್ಪ, ಅಭಿಷೇಕ್ ಅಯ್ಯಂಗರ್, ಹರ್ಷಿತಾ ಗೌಡ, ಹರೀಶ್ ಚೌಹಾನ್, ಹರ್ಷ ಗೋ ಭಟ್ ಮುಂತಾದವರಿದ್ದಾರೆ.

ಶ್ರೀ ಸತ್ಯಸಾಯಿ ಆರ್ಟ್ಸ್ ಬ್ಯಾನರ್‌ನಡಿ ತೆಲುಗಿನ ಖ್ಯಾತ ನಿರ್ಮಾಪಕರಾದ ಕೆ.ಕೆ ರಾಧಾ ಮೋಹನ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅಭಿಷೇಕ್ ಅಯ್ಯಂಗಾರ್ ಸಂಭಾಷಣೆ,  ಪ್ರಮೋದ್ ಭಾರತಿಯ ಛಾಯಾಗ್ರಹಣ, ಟೈಗರ್ ಶಿವು ಸಾಹಸ ಚಿತ್ರಕ್ಕಿದೆ.

ವರದಿ: -ಸಂಜಯ್ ನಾಗ್